ADVERTISEMENT

ಒಬಿಸಿ ಮೀಸಲಾತಿಗೆ ‘ಸುಪ್ರೀಂ‘ ನಿರ್ದೇಶನ: ಚರ್ಚಿಸಲು ಶೀಘ್ರ ಸಭೆ– ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2022, 6:52 IST
Last Updated 12 ಫೆಬ್ರುವರಿ 2022, 6:52 IST
   

ಬೆಂಗಳೂರು: ‘ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಹಿಂದುಳಿದ ವರ್ಗದವರಿಗೆ ಮೀಸಲಾತಿ ನೀಡುವ ಕುರಿತು ಸುಪ್ರೀಂ ಕೋರ್ಟ್‌ ಇತ್ತೀಚೆಗೆ ನೀಡಿದ ತೀರ್ಪಿನ ಬಗ್ಗೆ ಚರ್ಚಿಸಲು ಶೀಘ್ರದಲ್ಲಿ ಸಭೆ ಕರೆಯುತ್ತೇನೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗದವರಿಗೆ (ಒಬಿಸಿ) ಮೀಸಲಾತಿ ವಿಚಾರದಲ್ಲಿ ಏನೇನು ಪರಿಣಾಮಗಳಾಗುತ್ತದೆ ಎನ್ನುವ ಬಗ್ಗೆ ಚರ್ಚಿಸಲಾಗುವುದು’ ಎಂದರು.

‘ಈ ಆದೇಶ ಎಲ್ಲ ರಾಜ್ಯಗಳಿಗೂ ಅನ್ವಯವಾಗುತ್ತದೆ. ನಮ್ಮ ರಾಜ್ಯದ ಸ್ಥಿತಿಗತಿ, ಒಬಿಸಿ ವರ್ಗಕ್ಕೆ ಇದುವರೆಗೆ ಏನು ಮೀಸಲಾತಿ ಕೊಡುತ್ತ ಬಂದಿದ್ದೇವೆ ಮತ್ತು ಆ ಮೀಸಲಾತಿಯನ್ನು ಉಳಿಸಿಕೊಂಡು ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆ ಹೇಗೆ ನಡೆಸಬೇಕು ಎಂಬ ಬಗ್ಗೆ ಸಮಾಲೋಚನೆ ನಡೆಸುತ್ತೇನೆ’ ಎಂದರು.

ADVERTISEMENT

‘ಪದವಿಪೂರ್ವ ತರಗತಿಯನ್ನು ಮತ್ತೆ ಆರಂಭಿಸುವ ಬಗ್ಗೆ ಗೃಹ ಸಚಿವರು, ಶಿಕ್ಷಣ ಸಚಿವರು ಸೋಮವಾರ ಸಭೆ ನಡೆಸಿ ತೀರ್ಮಾನಿಸುತ್ತಾರೆ’ ಎಂದೂ ತಿಳಿಸಿದರು.

ಈ ಕುರಿತಂತೆ ‘ಒಬಿಸಿ: ರಾಜಕೀಯ ಮೀಸಲಿಗೆ ತೂಗುಗತ್ತಿ‘ ಎಂಬ ಶೀರ್ಷಿಕೆಯಡಿ 'ಪ್ರಜಾವಾಣಿ'ಯಲ್ಲಿ ವರದಿ ಪ್ರಕಟವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.