ಡಿ.ಕೆ ಶಿವಕುಮಾರ್
ಬೆಂಗಳೂರು: ‘ನಮ್ಮ ತೆರಿಗೆ ನಮ್ಮ ಹಕ್ಕಿಗಾಗಿ ನಾವು ಕೇಂದ್ರ ಸರ್ಕಾರದ ಮುಂದೆ ಹೋರಾಟ ಮಾಡಲೇಬೇಕು. ನಮ್ಮ ರಾಜ್ಯದ ಹಿತ ಕಾಪಾಡಲೇಬೇಕು’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
‘ರಾಜ್ಯ ಸರ್ಕಾರವು ನಮ್ಮ ತೆರಿಗೆ ನಮ್ಮ ಹಕ್ಕು ಹೋರಾಟ ಮುಂದುವರಿಸಲಿದೆಯೇ’ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಬಿಜೆಪಿಯ ಇಷ್ಟೊಂದು ಜನ ಸಂಸದರು ಏಕೆ ಮೌನವಾಗಿದ್ದಾರೆ ಎಂಬುದು ನನಗೆ ಅರ್ಥವಾಗುತ್ತಿಲ್ಲ’ ಎಂದರು.
‘ನೀರಾವರಿ ಮತ್ತು ನಗರಾಭಿವೃದ್ಧಿಗೆ ನೀಡುವ ಅನುದಾನದ ವಿಚಾರದಲ್ಲಿ ಕೇಂದ್ರ ಸರ್ಕಾರ ಕೊಟ್ಟ ಮಾತು ಉಳಿಸಿಕೊಂಡಿಲ್ಲ. ರಾಜ್ಯಕ್ಕಾಗುತ್ತಿರುವ ತೆರಿಗೆ ಅನ್ಯಾಯವನ್ನು ಕಾನೂನಾತ್ಮಕವಾಗಿ ಹೇಗೆ ಎದುರಿಸಬೇಕು ಎಂಬುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧ್ಯಯನ ಮಾಡುತ್ತಿದ್ದಾರೆ. ತೆರಿಗೆ ಪಾಲು ಹಂಚಿಕೆಯಲ್ಲಿ ಅಸಮಾನತೆಗೆ ಸಂಬಂಧಿಸಿದಂತೆ ರಾಜ್ಯ ಬಜೆಟ್ ಮಂಡನೆ ವೇಳೆಗೆ ನಾವು ಉತ್ತರ ಕೊಡುತ್ತೇವೆ’ ಎಂದೂ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.