ADVERTISEMENT

ಒಕ್ಕಲಿಗರ ವಿಶ್ವವಿದ್ಯಾಲಯ ಸ್ಥಾಪನೆಗೆ ಒತ್ತು: ಪಿ.ವಿ.ಎಸ್‌.ಪ್ರಸಾದ್‌

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2021, 22:50 IST
Last Updated 10 ಡಿಸೆಂಬರ್ 2021, 22:50 IST
ಪಿ.ವಿ.ಎಸ್‌.ಪ್ರಸಾದ್‌
ಪಿ.ವಿ.ಎಸ್‌.ಪ್ರಸಾದ್‌   

ಬೆಂಗಳೂರು: ‘ಚುನಾವಣೆಯಲ್ಲಿ ಗೆದ್ದು ಬಂದರೆ ಒಕ್ಕಲಿಗರ ವಿಶ್ವವಿದ್ಯಾಲಯ ಹಾಗೂ ಐಐಟಿ ಸ್ಥಾಪಿಸಲು ಒತ್ತು ನೀಡುತ್ತೇನೆ’ ಎಂದು ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರ ಮಂಡಳಿಯ ಚುನಾವಣೆಗೆ ಸ್ಪರ್ಧಿಸಿರುವ ಕೆ.ಎಚ್‌.ರಾಮಯ್ಯ ತಂಡದ ಅಭ್ಯರ್ಥಿ ಪಿ.ವಿ.ಎಸ್‌.ಪ್ರಸಾದ್‌ ತಿಳಿಸಿದ್ದಾರೆ.

‘ಸಂಘದ ಅಧೀನದಲ್ಲಿರುವ ಎಲ್ಲ ಶಿಕ್ಷಣ ಸಂಸ್ಥೆಗಳನ್ನು ಒಂದೇ ಸೂರಿನಡಿ ತರಲು ಯತ್ನಿಸುತ್ತೇನೆ. ಒಕ್ಕಲಿಗರ ವಿಶ್ವವಿದ್ಯಾಲಯ ಸ್ಥಾಪಿಸಲು ಹೋರಾಟ ನಡೆಸುತ್ತೇನೆ’ ಎಂದು ಹೇಳಿದ್ದಾರೆ.

‘ಆಡಳಿತ ಮಂಡಳಿಯಲ್ಲಿ ಮಹಿಳೆಯರಿಗೆ ಎರಡು ಸ್ಥಾನ ಮೀಸಲಿಡಲು ಆದ್ಯತೆ ನೀಡುತ್ತೇನೆ. ಆರ್ಥಿಕವಾಗಿ ಹಿಂದುಳಿದಿರುವ ಮಕ್ಕಳಿಗೆ ಶುಲ್ಕ ಹಾಗೂ ಆರೋಗ್ಯ ಸೇವೆಯಲ್ಲಿ ರಿಯಾಯಿತಿ ಕಲ್ಪಿಸಲೂ ಒತ್ತು ನೀಡುತ್ತೇನೆ. ಸಮುದಾಯದ ಸಾಧಕರನ್ನು ಗುರುತಿಸಿ ಅವರಿಗೆ ವಿಶೇಷ ಗೌರವ ನೀಡಲೂ ಪ್ರಯತ್ನಿಸಲಾಗುತ್ತದೆ’ ಎಂದೂ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.