ADVERTISEMENT

‘ವಿವಾದಾತ್ಮಕ ವಿಚಾರಕ್ಕೆ ತಲೆಹಾಕುವುದಿಲ್ಲ’

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2020, 19:03 IST
Last Updated 27 ನವೆಂಬರ್ 2020, 19:03 IST
   

ಚನ್ನಪಟ್ಟಣ: ‘ಲಿಂಗಾಯತ ಸಮುದಾಯವನ್ನು ಒಬಿಸಿಗೆ ಸೇರ್ಪಡೆ ಮಾಡಲು ಶಿಫಾರಸು ಮಾಡುವ ವಿಚಾರದ ಬಗ್ಗೆ ಚರ್ಚೆ ಮಾಡುವುದಿಲ್ಲ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಶುಕ್ರವಾರ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು

‘ಮೀಸಲಾತಿ ಕಲ್ಪಿಸುವುದು ಹಾಗೂ ನಿಗಮ ರಚನೆ ಮಾಡುವುದು ಅವರವರ ಇಚ್ಛೆ. ಸ್ವಾರ್ಥಕ್ಕಾಗಿ ಮಾಡುತ್ತಿರುವ ವಿವಾದಾತ್ಮಕ ವಿಚಾರಕ್ಕೆ ತಲೆಹಾಕುವುದಿಲ್ಲ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.