ಮೈಸೂರು: ‘ಮೀಸಲಾತಿಗಾಗಿ ಹೋರಾಟ ನಡೆಸುತ್ತಿರುವ ಎಲ್ಲ ಸಮುದಾಯಗಳಿಗೆ ನ್ಯಾಯ ಒದಗಿಸುವುದು ನನ್ನ ಜವಾಬ್ದಾರಿ’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶನಿವಾರ ಹೇಳಿದರು.
‘ವಿವಿಧ ಸಮುದಾಯಗಳಿಗೆ ಮೀಸಲಾತಿ ಒದಗಿಸುವ ಸಂಬಂಧ ಚಿಂತನೆ ನಡೆದಿದೆ. ತಜ್ಞರ ಜತೆ ಚರ್ಚಿಸುತ್ತಿದ್ದೇನೆ. ಮೀಸಲಾತಿ ಕೇಳುವ ಹಕ್ಕು ಎಲ್ಲರಿಗೂ ಇದೆ. ನ್ಯಾಯ ಒದಗಿಸಲು ಪ್ರಾಮಾಣಿಕವಾಗಿ ಪ್ರಯತ್ನಸುತ್ತೇನೆ’ ಎಂದು ಇಲ್ಲಿ ತಿಳಿಸಿದರು.
ಬಜೆಟ್‌ನಲ್ಲಿ ಉತ್ತರ: ‘ಖಜಾನೆ ಖಾಲಿಯಾಗಿದೆ ಎಂದು ಟೀಕಿಸುವವರಿಗೆ ಬಜೆಟ್‌ನಲ್ಲೇ ಉತ್ತರ ಸಿಗಲಿದೆ. ಯಾವುದೇ ಅಭಿವೃದ್ಧಿ ಕೆಲಸ ನಿಂತಿಲ್ಲ. ಟೀಕಿಸುವುದು ವಿರೋಧಪಕ್ಷಗಳ ಸ್ವಭಾವ. ಟೀಕೆಗಳಿಗೆ ಉತ್ತರಿಸುವ ಅಗತ್ಯವಿಲ್ಲ ಎಂದು ಪ್ರತಿಕ್ರಿಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.