ADVERTISEMENT

ಟೊಯೊಟಾ ಬಿಕ್ಕಟ್ಟು ಶೀಘ್ರ ಇತ್ಯರ್ಥ

ಕಾರ್ಮಿಕ ಸಚಿವ ಶಿವರಾಮ್‌ ಹೆಬ್ಬಾರ್

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2021, 18:40 IST
Last Updated 2 ಫೆಬ್ರುವರಿ 2021, 18:40 IST

ಬೆಂಗಳೂರು: ಬಿಡದಿಯ ಟೊಯೊಟಾ ಕಾರ್ಖಾನೆಯಲ್ಲಿ 86 ದಿನಗಳಿಂದ ಕಾರ್ಮಿಕರು ಮತ್ತು ಆಡಳಿತ ಮಂಡಳಿ ನಡುವೆ ನಡೆಯುತ್ತಿರುವ ವಿವಾದವನ್ನು ಶೀಘ್ರದಲ್ಲಿ ಇತ್ಯರ್ಥಪಡಿಸಲಾಗುವುದು ಎಂದು ಕಾರ್ಮಿಕ ಸಚಿವ ಶಿವರಾಮ್‌ ಹೆಬ್ಬಾರ್‌ ಮಂಗಳವಾರ ವಿಧಾನಸಭೆಯಲ್ಲಿ ತಿಳಿಸಿದರು.

ಶೂನ್ಯ ವೇಳೆಯಲ್ಲಿ ಬಿಜೆಪಿ ಶಾಸಕ ಜಿ. ಕರುಣಾಕರ ರೆಡ್ಡಿ ಮಾಡಿದ ಪ್ರಸ್ತಾಪಕ್ಕೆ ಉತ್ತರಿಸಿದ ಸಚಿವರು, ‘ಖುದ್ದಾಗಿ ನಾನು ಟೊಯೊಟಾ ಕಾರ್ಖಾನೆಗೆ ಭೇಟಿ ನೀಡಿ ವಿವಾದ ಇತ್ಯರ್ಥಕ್ಕೆ ಪ್ರಯತ್ನಿಸಿದ್ದೇನೆ. ವಿಧಾನಸೌಧದಲ್ಲಿ ನಡೆಸಿದ ಸಭೆಯಿಂದ ಕಾರ್ಮಿಕ ಮುಖಂಡರು ದೂರ ಉಳಿದರು. 3,415 ಕಾರ್ಮಿಕರ ಪೈಕಿ 1,896 ಮಂದಿ ಈಗಾಗಲೇ ಕೆಲಸಕ್ಕೆ ಹಾಜರಾಗಿದ್ದಾರೆ. ವಿವಾದ ಇತ್ಯರ್ಥಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಯವರ ಜತೆಗೂ ಚರ್ಚೆ ನಡೆಸಲಾಗುವುದು’ ಎಂದರು.

‘ಕಾರ್ಮಿಕರನ್ನು ಕೆಲಸದಿಂದ ಕಿತ್ತುಹಾಕುವ ಪ್ರಯತ್ನ ನಡೆಯುತ್ತಿದೆ. ಮೂರು ನಿಮಿಷಗಳಲ್ಲಿ ಮಾಡಬಹುದಾದ ಕೆಲಸವನ್ನು ಎರಡೂವರೆ ನಿಮಿಷಗಳಲ್ಲೇ ಮಾಡಬೇಕೆಂದು ಕಾರ್ಮಿಕರಿಗೆ ಒತ್ತಡ ಹೇರಲಾಗುತ್ತಿದೆ ಎಂಬ ಮಾಹಿತಿ ಇದೆ. ಕಾರ್ಮಿಕರ ಹಿತವನ್ನೂ ಕಾಯ್ದುಕೊಂಡು ಕಾರ್ಖಾನೆಯಲ್ಲಿ ಪೂರ್ಣ ಪ್ರಮಾಣದ ಕೆಲಸ ಆರಂಭವಾಗುವಂತೆ ಕ್ರಮ ಕೈಗೊಳ್ಳಬೇಕು’ ಎಂದು ಕರುಣಾಕರ ರೆಡ್ಡಿ ಆಗ್ರಹಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.