ADVERTISEMENT

ಪಾಲಿಕೆಗಳಲ್ಲಿ ಅಧಿಕಾರ ಸಿಕ್ಕರೆ ಶೇ 50ರಷ್ಟು ಆಸ್ತಿ ತೆರಿಗೆ ರಿಯಾಯಿತಿ : ಡಿಕೆಶಿ

ಹುಬ್ಬಳ್ಳಿ– ಧಾರವಾಡ, ಬೆಳಗಾವಿ, ಕಲಬುರ್ಗಿ ಪಾಲಿಕೆ

​ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2021, 14:31 IST
Last Updated 29 ಆಗಸ್ಟ್ 2021, 14:31 IST
ಡಿ.ಕೆ ಶಿವಕುಮಾರ್‌
ಡಿ.ಕೆ ಶಿವಕುಮಾರ್‌    

ಹುಬ್ಬಳ್ಳಿ: ಹುಬ್ಬಳ್ಳಿ– ಧಾರವಾಡ, ಬೆಳಗಾವಿ, ಕಲಬುರ್ಗಿ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆಸ್ತಿ ತೆರಿಗೆಯಲ್ಲಿ ಶೇ50ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು.

ಭಾನುವಾರ ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್‌ನಿಂದಾಗಿ ಜನರು ತೀವ್ರ ಸಂಕಷ್ಟದಲ್ಲಿದ್ದಾರೆ. ಇಂತಹ ಸಮಯದಲ್ಲಿ ಅವರಿಗೆ ನೆರವು ನೀಡುವುದು ನಮ್ಮ ಕರ್ತವ್ಯ. ಗುಜರಾತ್‌ ಹಾಗೂ ತೆಲಂಗಾಣದಲ್ಲಿ ಈಗಾಗಲೇ ಆಸ್ತಿ ತೆರಿಗೆ ವಿನಾಯಿತಿ ಘೋಷಿಸಲಾಗಿದೆ. ಆದರೆ ರಾಜ್ಯದಲ್ಲಿ ಮಾತ್ರ ಅಂತಹ ಕ್ರಮ ಕೈಗೊಂಡಿಲ್ಲ. ಜನರು ಬಿಜೆಪಿಯ ಸುಳ್ಳು ಭರವಸೆಗಳಿಗೆ ಮರುಳಾಗದೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT