ADVERTISEMENT

ಡಿಸೆಂಬರ್ 19ರಿಂದ 29ರವರೆಗೆ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 17 ನವೆಂಬರ್ 2022, 16:04 IST
Last Updated 17 ನವೆಂಬರ್ 2022, 16:04 IST
ಬೆಳಗಾವಿ ಸುವರ್ಣಸೌಧ
ಬೆಳಗಾವಿ ಸುವರ್ಣಸೌಧ    

ಬೆಂಗಳೂರು: ವಿಧಾನ ಮಂಡಲದ ಚಳಿಗಾಲದ ಅಧಿವೇಶನವನ್ನು ಡಿ.19 ರಿಂದ 29 ರವರೆಗೆ ಬೆಳಗಾವಿಯಲ್ಲಿ ನಡೆಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.

ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಈ ವಿಷಯ ತಿಳಿಸಿದರು.

‘ರೈತರು ಖಾಸಗಿ ಜಮೀನಿನಲ್ಲಿ ಶ್ರೀಗಂಧವನ್ನು ಬೆಳೆಸಿ ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಅವಕಾಶ ನೀಡುವ ‘ಕರ್ನಾಟಕ ರಾಜ್ಯ ಶ್ರೀಗಂಧ ನೀತಿ– 2022’ ಕ್ಕೆ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ವಿವರಿಸಿದರು.

ADVERTISEMENT

ದೇಶ ಮತ್ತು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಶ್ರೀಗಂಧಕ್ಕೆ ವ್ಯಾಪಕ ಬೇಡಿಕೆ ಇದೆ. ಗಂಧವನ್ನು ಬೆಳೆಸುವ ರೈತರಿಗೆ ಮಾರ್ಗದರ್ಶನ ಮತ್ತು ಪ್ರೋತ್ಸಾಹ ನೀಡುವುದರ ಜತೆಗೆ, ಗಂಧದ ಮರಕ್ಕೆ ಚಿಪ್‌ ಅಳವಡಿಸಿ ಕಳ್ಳತನ ಆಗುವುದನ್ನು ತಡೆಯಲು ಸರ್ಕಾರ ಕ್ರಮ ಕೈಗೊಳ್ಳಲಿದೆ. ಈ ಕ್ರಮದಿಂದಾಗಿ ರೈತರ ಆದಾಯವೂ ಹೆಚ್ಚಾಗಲಿದೆ ಎಂದರು.

ರಾಜ್ಯದಲ್ಲಿ ಮೈಸೂರ್ ಸೋಪ್ಸ್‌ಗೆ ಗಂಧದ ಮರಗಳು ಕೊರತೆ ಆಗಿರುವ ಕಾರಣ ಆಸ್ಟ್ರೇಲಿಯಾದಿಂದ ಆಮದು ಮಾಡಿಕೊಳ್ಳಲಾಗುತ್ತಿದೆ. ರೈತರು ಬೆಳೆದ ಗಂಧ ಈ ಕಾರ್ಖಾನೆಗೆ ಪೂರೈಕೆ ಮಾಡುವುದರ ಜತೆಗೆ ಖಾಸಗಿ ಸಂಸ್ಥೆಗಳಿಗೂ ಪೂರೈಕೆ ಮಾಡಬಹುದಾಗಿದೆ. ಹಿಂದೆ ಮುಕ್ತವಾಗಿ ಮಾರಾಟ ಮಾಡುವುದಕ್ಕೆ ನಿರ್ಬಂಧವಿತ್ತು ಎಂದು ಸುಧಾಕರ್‌ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.