ADVERTISEMENT

ತೇಜಸ್ವಿ ಸೂರ್ಯ ಹೇಳಿಕೆ ಕೇಳಿ ಹೂಡಿಕೆದಾರರು ಬೆಂಗಳೂರಿಗೆ ಬರುತ್ತಾರೆಯೇ: ಡಿಕೆಶಿ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2020, 10:25 IST
Last Updated 28 ಸೆಪ್ಟೆಂಬರ್ 2020, 10:25 IST
ಡಿಕೆ ಶಿವಕುಮಾರ್‌
ಡಿಕೆ ಶಿವಕುಮಾರ್‌   

ಬೆಂಗಳೂರು: ‘ಬೆಂಗಳೂರನ್ನು ಭಯೋತ್ಪಾದನೆಯ ಕೇಂದ್ರಬಿಂದು ಎಂದು ಕರೆದ ಮೇಲೆ ಯಾವ ಹೂಡಿಕೆದಾರರು ಬೆಂಗಳೂರು ಮತ್ತು ಕರ್ನಾಟಕಕ್ಕೆ ಬರುತ್ತಾರೆ,’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಅವರು ಸೋಮವಾರ ಪ್ರಶ್ನೆ ಮಾಡಿದ್ದಾರೆ.

ಈ ಸಂಬಂಧ ಟ್ವೀಟ್‌ ಮಾಡಿರುವ ಡಿ.ಕೆ ಶಿವಕುಮಾರ್‌, ‘ತಂತ್ರಜ್ಞಾನದಲ್ಲಿ ಜಾಗತಿಕವಾಗಿ ಖ್ಯಾತಿ ಪಡೆದಿರುವ ಬೆಂಗಳೂರನ್ನು ಭಯೋತ್ಪಾದನೆಯ ಕೇಂದ್ರಬಿಂದು ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಕರೆದಿರುವುದು ಖಂಡನೀಯ. ಜಿಡಿಪಿ ಬೆಳವಣಿಗೆ ಕುಸಿದಿರುವ ಸಂದರ್ಭದಲ್ಲಿ ತೇಜಸ್ವಿ ಸೂರ್ಯ ಅವರ ಹೇಳಿಕೆಯಿಂದಾಗಿ ಯಾವ ಹೂಡಿಕೆದಾರರು ಬೆಂಗಳೂರು ಮತ್ತು ಕರ್ನಾಟಕಕ್ಕೆ ಬರುತ್ತಾರೆ? ಪ್ರಧಾನಿ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಬಗ್ಗೆ ಉತ್ತರಿಸುತ್ತಾರೆಯೇ? ಎಂದು ಪ್ರಶ್ನೆ ಮಾಡಿದ್ದಾರೆ.

ಬೆಂಗಳೂರು ಭಯೋತ್ಪಾದಕ ಚಟುವಟಿಕೆಗಳ ಕೇಂದ್ರಬಿಂದುವಾಗಿದೆ, ನಗರದಲ್ಲಿ ಎನ್ಐಎ ಮಾಡಿರುವ ಹಲವು ಬಂಧನಗಳು ಅದನ್ನು ಸಾಬೀತು ಮಾಡಿವೆ. ಬೆಂಗಳೂರಿನಲ್ಲಿ ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಶಾಶ್ವತ ವಿಭಾಗವನ್ನು ಸ್ಥಾಪಿಸುವಂತೆ ನಾನು ಗೃಹ ಸಚಿವ ಅಮಿತ್ ಶಾ ಅವರನ್ನು ಒತ್ತಾಯಿಸಿದೆ. ಶೀಘ್ರದಲ್ಲೇ ಎನ್‌ಐಎಯನ್ನು ಸ್ಥಾಪಿಸಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಭಾನುವಾರ ಹೇಳಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.