ADVERTISEMENT

ಇಬ್ಬರು ಮಕ್ಕಳಿಗೆ ವಿಷವಿಟ್ಟು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ತಾಯಿ

​ಪ್ರಜಾವಾಣಿ ವಾರ್ತೆ
Published 11 ಜೂನ್ 2019, 5:55 IST
Last Updated 11 ಜೂನ್ 2019, 5:55 IST
   

ಬೆಂಗಳೂರು: ತನ್ನಿಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ತಾಯಿಯೂ ನೇಣು ಹಾಕಿಕೊಂಡು ‌ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಹೆಬ್ಬಾಳದಲ್ಲಿ ನಡೆದಿದೆ.

'ಮನೋರಾಯನಪಾಳ್ಯದ ನಿವಾಸಿ ಪುಷ್ಪಾವತಿ ತನ್ನ 7 ವರ್ಷದ ಮಗ ಹಾಗೂ 5 ತಿಂಗಳ ಕೂಸಿಗೆ ವಿಷ ಹಾಕಿ ಕೊಂದಿದ್ದಾಳೆ. ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ' ಎಂದು ಹೆಬ್ಬಾಳ ಪೊಲೀಸರು ತಿಳಿಸಿದರು.

'ಖಾಸಗಿ ಕಂಪನಿಯಲ್ಲಿ ವಾಹನ ಚಾಲಕರಾಗಿ ಕೆಲಸ ಮಾಡುತ್ತಿದ್ದ ನಾಗರಾಜ್ ಎಂಬುವರಿಗೆ ಪುಷ್ಟಾವತಿಯನ್ನು ಮದುವೆ ಮಾಡಿಕೊಡಲಾಗಿತ್ತು. ಮನೆಯಲ್ಲಿ ಮರಣಪತ್ರ ಸಿಕ್ಕಿದೆ' ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.ಘಟನೆಗೆ ಕಾರಣವೇನೆಂದು ಸ್ಪಷ್ಟವಾಗಿಲ್ಲ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.