ADVERTISEMENT

ಕೃಷ್ಣಾ ಪ್ರವಾಹದಲ್ಲಿ ಕೊಚ್ಚಿ ಹೋದ ಮಹಿಳೆ

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2019, 14:21 IST
Last Updated 7 ಸೆಪ್ಟೆಂಬರ್ 2019, 14:21 IST
ಶೋಭಾ ಸುತಾರ
ಶೋಭಾ ಸುತಾರ   

ಅಥಣಿ (ಬೆಳಗಾವಿ ಜಿಲ್ಲೆ) : ಇಲ್ಲಿಗೆ ಸಮೀಪದ ಜನವಾಡ ಗ್ರಾಮದ ಶೋಭಾ ಬಾಳಪ್ಪ ಸುತಾರ (40) ಮನೆಯಲ್ಲಿದ್ದ ಸಾಮಗ್ರಿಗಳನ್ನು ಶನಿವಾರ ಬೇರೆಡೆ ಸಾಗಿಸುವಾಗ ಕೃಷ್ಣಾ ನದಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ.

ಕಳೆದ ತಿಂಗಳು ಕೃಷ್ಣಾ ನದಿಯಲ್ಲಿ ಪ್ರವಾಹ ಬಂದಿದ್ದರಿಂದ ಶೋಭಾ ಅವರು ತಮ್ಮ ಮನೆ ತೊರೆದು, ಸಮೀಪದ ಪರಿಹಾರ ಕೇಂದ್ರದಲ್ಲಿ ಆಶ್ರಯ ಪಡೆದಿದ್ದರು. ಈಗ ಪುನಃ ನದಿ ನೀರು ಹೆಚ್ಚಳವಾಗುತ್ತಿರುವುದರಿಂದ ಮನೆಯಲ್ಲಿದ್ದ ಸಾಮಗ್ರಿಗಳನ್ನು ಬೇರೆಡೆ ಸಾಗಿಸಲು ಹೋಗಿದ್ದರು.

ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.