ADVERTISEMENT

ಮಹಿಳೆಯರ ಸಾಂತ್ವನ ಕೇಂದ್ರಗಳಿಗೆ ಬೀಗ ಹಾಕಿದ್ದು ಖಂಡನೀಯ: ಎಚ್‌ಡಿ ಕುಮಾರಸ್ವಾಮಿ

​ಪ್ರಜಾವಾಣಿ ವಾರ್ತೆ
Published 15 ಮೇ 2020, 16:10 IST
Last Updated 15 ಮೇ 2020, 16:10 IST
   

ಬೆಂಗಳೂರು: ಮಹಿಳೆಯರಿಗೆಆಸರೆಯಾಗಿರುವಸಾಂತ್ವನ ಕೇಂದ್ರಗಳನ್ನು ಮುಚ್ಚಲು ಹೊರಟಿರುವುದು, ಕೋವಿಡ್‌–19 ಸಂಕಷ್ಟದ ಸಮಯದಲ್ಲಿಸ್ತ್ರೀಯರನ್ನು ಸಮಸ್ಯೆಗೆ ದೂಡಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ರಾಜ್ಯಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಈ ಸಂಬಂಧ ಟ್ವಿಟರ್‌ನಲ್ಲಿ ಸರಣಿ ಟ್ವೀಟ್‌ ಮಾಡಿರುವ ಅವರು, ಸರ್ಕಾರಯಾವುದೇ ಕಾರಣಕ್ಕೂಸಾಂತ್ವನ ಕೇಂದ್ರಗಳನ್ನು ಮುಚ್ಚಬಾರದು ಎಂದು ಆಗ್ರಹಿಸಿದ್ದಾರೆ.

‘ಮಹಿಳೆಯರಿಗೆ ಆಸರೆಯಾಗಿದ್ದ ಸಾಂತ್ವನ ಕೇಂದ್ರಗಳಿಗೆ ಸರ್ಕಾರ ಬೀಗ ಜಡಿಯಲು ಹೊರಟಿರುವುದು ಕೋವಿಡ್-19 ಸಂಕಷ್ಟದಲ್ಲಿ ಸ್ತ್ರೀಯರಿಗೆ ಮತ್ತೊಂದು ಬರೆ ಎಳೆದಂತಾಗಿದೆ.ಕೌಟುಂಬಿಕ ಹಿಂಸಾಚಾರ ನಿಯಂತ್ರಿಸಿ ಮಹಿಳೆಯರು ಮತ್ತು ಮಕ್ಕಳಿಗೆ ರಕ್ಷಣೆ ಒದಗಿಸುವ ವಿಶ್ವಸಂಸ್ಥೆಯ ಆಶಯ ಬದಿಗೊತ್ತಿರುವುದು ಖಂಡನೀಯ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ADVERTISEMENT

ಮುಂದುವರಿದು, ‘ಕಳೆದ ಎರಡು ದಶಕಗಳಿಂದ ಸಾಂತ್ವನ ಯೋಜನೆ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದ್ದು, ಜಿಲ್ಲಾ, ತಾಲ್ಲೂಕು ಮಟ್ಟದಲ್ಲಿನ ಸಾಂತ್ವನ ಕೇಂದ್ರಗಳು ಮಹಿಳೆಯರ ಸಮಸ್ಯೆಗಳಿಗೆ ಧ್ವನಿಯಾಗಿ, ಆತ್ಮವಿಶ್ವಾಸ ಮೂಡಿಸುವ ಕೆಲಸದಲ್ಲಿ ಮಗ್ನವಾಗಿದ್ದವು’ ಎಂದಿದ್ದಾರೆ.

‘ಲಾಕ್‌ಡೌನ್ ಕಾಲದಲ್ಲಿ ಸಾಂತ್ವನ ಕೇಂದ್ರಗಳನ್ನು ಮುಚ್ಚಿ, ಮದ್ಯದಂಗಡಿಗಳನ್ನು ತೆರೆದು ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಳಕ್ಕೆ ಸರ್ಕಾರವೇ ಅವಕಾಶ ಮಾಡಿಕೊಟ್ಟಿದೆ. ಸಾಂತ್ವನ ಕೇಂದ್ರಗಳನ್ನು ಯಾವುದೇ ಕಾರಣಕ್ಕೂ ಮುಚ್ಚಬಾರದು’ ಎಂದು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.