ಮಹಿಳಾ ಆಯೋಗ
ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷೆ ಡಾ.ವಸುಂಧರಾ ಭೂಪತಿ ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ಹಾಗೂ ಬಾಗಲಕೋಟೆ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ ಶೆಲ್ಲಿಕೇರಿ ಅವರ ವಿರುದ್ಧ ಕಾನೂನು ಕ್ರಮಕ್ಕೆ ಕೋರಿ ಬರೆದ ಪತ್ರದ ವಿಚಾರವಾಗಿ ವರದಿ ನೀಡುವಂತೆ ಕರ್ನಾಟಕ ರಾಜ್ಯ ಮಹಿಳಾ ಆಯೋಗವು ಸೂಚನೆ ನೀಡಿದೆ.
‘ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರು ಹಾಗೂ ಸಹಕಾರ ಇಲಾಖೆ ಉಪ ನಿಬಂಧಕರು ಅರ್ಜಿಯಲ್ಲಿನ ಅಂಶಗಳ ಸತ್ಯಾಸತ್ಯತೆ ಪರಿಶೀಲಿಸಿ ನಿಯಮಾನುಸಾರ ಸೂಕ್ತ ಕ್ರಮ ಕೈಗೊಂಡು ಅರ್ಜಿದಾರರಿಗೆ ನ್ಯಾಯ ಹಾಗೂ ರಕ್ಷಣೆ ಒದಗಿಸಬೇಕು’ ಎಂದು ಆಯೋಗದ ಕಾರ್ಯದರ್ಶಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.