ADVERTISEMENT

ಅಂಗವಿಕಲ ನೌಕರರಿಗೆ ‘ವರ್ಕ್ ಫ್ರಂ ಹೋಂ’ ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2021, 16:22 IST
Last Updated 5 ಫೆಬ್ರುವರಿ 2021, 16:22 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ಕೋವಿಡ್‌ ಕಾರಣದಿಂದ ವಿವಿಧ ಇಲಾಖೆ, ಸರ್ಕಾರಿ ಸಂಸ್ಥೆಗಳ ಅಂಗವಿಕಲ ನೌಕರರಿಗೆ ನೀಡಿರುವ ‘ವರ್ಕ್ ಫ್ರಂ ಹೋಂ’ ಸೌಲಭ್ಯವನ್ನು ವಿಸ್ತರಿಸಿ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್‌ ಶುಕ್ರವಾರ ಸುತ್ತೋಲೆ ಹೊರಡಿಸಿದ್ದಾರೆ.

ಅಂಧರೂ ಸೇರಿದಂತೆ ವಿವಿಧ ರೀತಿಯ ಅಂಗವೈಕಲ್ಯ ಹೊಂದಿರುವ ನೌಕರರಿಗೆ ಕಚೇರಿಗೆ ಬಂದು ಕೆಲಸ ಮಾಡುವುದು ಕಷ್ಟವಾಗುತ್ತದೆ ಎಂಬ ಕಾರಣಕ್ಕೆ ಈ ಸೌಲಭ್ಯ ಒದಗಿಸಲಾಗಿದೆ.

ರಾಜ್ಯ ಸರ್ಕಾರದ ಎಲ್ಲ ಇಲಾಖೆಗಳು, ನಿಗಮಗಳು, ಮಂಡಳಿಗಳು, ಸರ್ಕಾರಿ, ಅರೆ ಸರ್ಕಾರಿ ಮತ್ತು ಸ್ವಾಯತ್ತ ಸಂಸ್ಥೆಗಳ ಅಂಗವಿಕಲ ನೌಕರರು ಮನೆಯಿಂದಲೇ ಕಾರ್ಯನಿರ್ವಹಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.