ADVERTISEMENT

ನೂತನ ಶಿಕ್ಷಣ ನೀತಿ ಕುರಿತು 430 ಕಾಲೇಜುಗಳಲ್ಲಿ ಕಾರ್ಯಾಗಾರ: ಅಶ್ವತ್ಥನಾರಾಯಣ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2021, 17:28 IST
Last Updated 6 ಸೆಪ್ಟೆಂಬರ್ 2021, 17:28 IST
   

ಮಂಡ್ಯ: ‘ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ರಾಜ್ಯದ 430 ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೆ.7ರಂದು ಒಂದು ದಿನದ ಕಾರ್ಯಾಗಾರ ನಡೆಯಲಿದೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಸೋಮವಾರ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಎಲ್ಲಾ ಸರ್ಕಾರಿ ಕಾಲೇಜುಗಳಲ್ಲಿ ವಿಚಾರ ಸಂಕಿರಣವನ್ನು ನಡೆಸುವಂತೆ ಆಯಾ ಕಾಲೇಜುಗಳ ಪ್ರಾಂಶುಪಾಲರಿಗೆ ಸೂಚಿಸಲಾಗಿದೆ. ಕಾಲೇಜುಗಳ ಅಧ್ಯಾಪಕರು ಹಾಗೂ ದ್ವಿತೀಯ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳು ಮತ್ತು ಪೋಷಕರು ಈ ವಿಚಾರ ಸಂಕಿರಣದಲ್ಲಿ ಪಾಲ್ಗೊಳ್ಳಲಿದ್ದಾರೆ’ ಎಂದರು.

‘ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಈಗಾಗಲೇ ಎನ್‌ಇಪಿ ಕುರಿತು ಉಪನ್ಯಾಸ, ವಿಚಾರ ಸಂಕಿರಣಗಳು ನಡೆದಿವೆ. ಕೆಲ ಕಾಲೇಜುಗಳಲ್ಲಿ ಸಂವಾದಗಳನ್ನು ಆಯೋಜಿಸುತ್ತಿದ್ದಾರೆ. ಈಗ ಇದನ್ನು ರಾಜ್ಯದಾದ್ಯಂತ ಎಲ್ಲಾ ಕಾಲೇಜುಗಳಿಗೂ ವಿಸ್ತರಿಸಲಾಗುತ್ತಿದೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.