ADVERTISEMENT

ಶಿಕ್ಷಣ ನೀತಿ ಜಾರಿಗೆ ಕಾರ್ಯಾಗಾರ ಅವಶ್ಯಕ: ಬಸವರಾಜ ಹೊರಟ್ಟಿ

​ಪ್ರಜಾವಾಣಿ ವಾರ್ತೆ
Published 25 ಮೇ 2023, 5:28 IST
Last Updated 25 ಮೇ 2023, 5:28 IST
 ಬಸವರಾಜ ಹೊರಟ್ಟಿ
ಬಸವರಾಜ ಹೊರಟ್ಟಿ   

ಹುಬ್ಬಳ್ಳಿ: ‘ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಜಾರಿಗೊಳಿಸುವ ಮೊದಲು, ರಾಜ್ಯ ಮಟ್ಟದಿಂದ ತಾಲ್ಲೂಕು ಮಟ್ಟದವರೆಗೆ ವಿಶೇಷ ತರಬೇತಿ ಕಾರ್ಯಾಗಾರ ನಡೆಸುವ ಅವಶ್ಯಕತೆ ಇದೆ’ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅಭಿಪ್ರಾಯಪಟ್ಟಿದ್ದಾರೆ.

‘ಎನ್‌ಇಪಿಯನ್ನು ಹೇಗೆ ಅನುಷ್ಠಾನಗೊಳಿಸಬೇಕು ಎಂಬುದರ ಬಗ್ಗೆ ವಿಸ್ತೃತ ಚರ್ಚೆಯಾದಾಗ ಮಾತ್ರ ಅರ್ಥಪೂರ್ಣವಾಗಿ ಅನುಷ್ಠಾನಗೊಳಿಸಲು ಸಾಧ್ಯ’ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

‘ಕೇಂದ್ರವು ಎನ್‌ಇಪಿ ಜಾರಿಗೆ ಈಗಾಗಲೇ ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ. ರಾಜ್ಯದಲ್ಲಿ ಅಷ್ಟೊಂದು ಪ್ರಗತಿಯಾಗಿಲ್ಲದಿರುವುರಿಂದ ವಿಭಾಗೀಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ನೀತಿ ಬಗ್ಗೆ ಕಾರ್ಯಾಗಾರ ನಡೆಸಬೇಕು. ಸಮಗ್ರ ಶಿಕ್ಷಣವು ಮೌಲ್ಯಾಧಾರಿತವಾಗಿ ಜಾರಿಗೊಳ್ಳಲು ಸರ್ಕಾರ ಮುತುವರ್ಜಿ ವಹಿಸಬೇಕು’ ಎಂದು ಸಲಹೆ ನೀಡಿದ್ದಾರೆ.

ADVERTISEMENT

‘ಮೇಲ್ಮನೆ ಮುಂಚೆ ಚಿಂತಕರ ಚಾವಡಿಯಾಗಿತ್ತು. ಅನೇಕ ವಿಚಾರಗಳ ಗಹನ ಚರ್ಚೆ ನಡೆಯುತ್ತಿತ್ತು. ಈಗ, ಅಂತಹ ಚರ್ಚೆ ನಡೆಯದಿರುವುದು ಬೇಸರ ತಂದಿದೆ. ಹೊಸ ಸರ್ಕಾರ ಜನರ ನಿರೀಕ್ಷೆಯನ್ನು ಸಾಕಾರಗೊಳಿಸುವ ಕಾರ್ಯವನ್ನು ಮಾಡಬೇಕಿದೆ. ಅದಕ್ಕಾಗಿ ಎಲ್ಲರೂ ಒಮ್ಮತದಿಂದ ದುಡಿಯಬೇಕಿದೆ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.