ADVERTISEMENT

World Environment Day 2022: ಪ್ರಕೃತಿಯೊಂದಿಗೆ ಸಾಮರಸ್ಯದಿಂದ ಬದುಕಲು ಸಿಎಂ ಕರೆ

​ಪ್ರಜಾವಾಣಿ ವಾರ್ತೆ
Published 5 ಜೂನ್ 2022, 4:25 IST
Last Updated 5 ಜೂನ್ 2022, 4:25 IST
ಚಿತ್ರ ಕೃಪೆ: (ಟ್ವಿಟರ್, @BSBommai)
ಚಿತ್ರ ಕೃಪೆ: (ಟ್ವಿಟರ್, @BSBommai)   

ಬೆಂಗಳೂರು: ವಿಶ್ವ ಪರಿಸರ ದಿನದ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರು ಶುಭಾಶಯಗಳನ್ನು ಕೋರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಬೊಮ್ಮಾಯಿ, ಪ್ರಕೃತಿಯೊಂದಿಗೆ ಸಾಮರಸ್ಯದಿಂದ ಬದುಕಲು ಕರೆ ನೀಡಿದ್ದಾರೆ.

'ಇರುವುದೊಂದೇ ಭೂಮಿ, ಪರಿಸರವೇ ನಮ್ಮೆಲ್ಲರ ಆಸ್ತಿ, ಪ್ರಕೃತಿಯೊಂದಿಗೆ ಸಾಮರಸ್ಯದಿಂದ ಬದುಕೋಣ. ಮುಂದಿನ ಪೀಳಿಗೆಗಾಗಿ ಪರಿಸರವನ್ನು ಸಂರಕ್ಷಿಸುವ ಕಾರ್ಯಕ್ಕೆ ಮುಂದಾಗೋಣ. ವಿಶ್ವ ಪರಿಸರ ದಿನದ ಶುಭಾಶಯಗಳು' ಎಂದು ಹೇಳಿದ್ದಾರೆ.

ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಸಹ ಶುಭ ಹಾರೈಸಿದ್ದು, ನಾವು ಪರಿಸರವನ್ನು ಉಳಿಸಿದರೆ ಪರಿಸರ ನಮ್ಮನ್ನು ಉಳಿಸುತ್ತದೆ ಎಂಬ ಸತ್ಯವನ್ನು ಮನವರಿಕೆ ಮಾಡಿದ್ದಾರೆ.

'ನಾವು ಪರಿಸರವನ್ನು ಉಳಿಸಿದರೆ ಪರಿಸರ ‌ನಮ್ಮನ್ನು ಉಳಿಸುತ್ತದೆ ಎಂಬ ಸರಳ ಸತ್ಯವನ್ನು ವರ್ತಮಾನದಲ್ಲಿ ಅರ್ಥಮಾಡಿಕೊಂಡರೆ ಇಂದಿನ‌ ಮತ್ತು ಮುಂದಿನ‌ ತಲೆಮಾರಿಗೆ ಭವಿಷ್ಯ ಸುರಕ್ಷಿತವಾಗಿ ಉಳಿಯಲಿದೆ. ಭೂತಾಯಿಯ ಮಕ್ಕಳೆಲ್ಲರಿಗೂ ವಿಶ್ವ ಪರಿಸರ ದಿನದ ಶುಭ ಹಾರೈಕೆಗಳು' ಎಂದು ಟ್ವೀಟ್ ಮಾಡಿದ್ದಾರೆ.

ಕುಮಾರಸ್ವಾಮಿ ತಮ್ಮ ಸಂದೇಶದಲ್ಲಿ, 'ಪರಿಸರವಿಲ್ಲದೆ ನಾವಿಲ್ಲ, ಪರಿಸರದಿಂದಲೇ ನಾವೆಲ್ಲ' ಎಂಬುದನ್ನು ಮರೆಯದಿರೋಣ. ಅನುಕ್ಷಣವು ಪರಿಸರವನ್ನು ರಕ್ಷಿಸಲು ಕಂಕಣಬದ್ಧರಾಗೋಣ' ಎಂದು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.