ನಡ್ಡಾ ಜೊತೆ ಶ್ರೀರಾಮುಲು
ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಪಕ್ಷದ ಮಾಜಿ ಸಚಿವ ಬಿ. ಶ್ರೀರಾಮುಲು ಭೇಟಿ ಮಾಡಿ ಚರ್ಚಿಸಿದರು.
ಕಲ್ಯಾಣರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷ ಹಾಗೂ ಶಾಸಕ ಜನಾರ್ದನ ರೆಡ್ಡಿ ಅವರೂ ಸದ್ಯದಲ್ಲೇ ಬಿಜೆಪಿಗೆ ವಾಪಸಾಗಲಿದ್ದಾರೆ ಎಂಬ ಚರ್ಚೆ ಪಕ್ಷದಲ್ಲಿ ಆರಂಭವಾಗಿದೆ. ‘ಬಿಜೆಪಿ ಸೇರ್ಪಡೆಗೆ ರೆಡ್ಡಿ ಉತ್ಸುಕರಾಗಿದ್ದಾರೆ. ಅವರನ್ನು ಶೀಘ್ರದಲ್ಲಿ ಪಕ್ಷಕ್ಕೆ ಸೇರಿಸಿಕೊಳ್ಳಬೇಕು. ಇದರಿಂದ ಬಳ್ಳಾರಿ, ಕೊಪ್ಪಳ ಮತ್ತಿತರ ಕ್ಷೇತ್ರಗಳಲ್ಲಿ ಪಕ್ಷಕ್ಕೆ ಅನುಕೂಲವಾಗಲಿದೆ’ ಎಂದು ಶ್ರೀರಾಮುಲು ಅವರು ವರಿಷ್ಠರ ಗಮನಕ್ಕೆ ತಂದರು.
ಶ್ರೀರಾಮುಲು ಅವರು ಬಳ್ಳಾರಿ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯೂ ಆಗಿದ್ದಾರೆ. ‘ಪಕ್ಷ ಅವಕಾಶ ನೀಡಿದರೆ ಸ್ಪರ್ಧಿಸಲು ಸಿದ್ಧ’ ಎಂದೂ ಅವರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.