ಗಂಗಾವತಿ (ಕೊಪ್ಪಳ): ಗಂಗಾವತಿ ತಾಲ್ಲೂಕಿನ ಚಿಕ್ಕರಾಂಪುರ ಸಮೀಪದ ಅಂಜನಾದ್ರಿ ಬೆಟ್ಟಕ್ಕೆ ಮೈಸೂರು ಸಂಸ್ಥಾನದ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ದಂಪತಿ ಹಾಗೂ ಅವರ ತಾಯಿ ಪ್ರಮೋದದೇವಿ ಸೋಮವಾರ ಭೇಟಿ ನೀಡಿದರು.
ಅಂಜನಾದ್ರಿ ಬೆಟ್ಟದ 545 ಮೆಟ್ಟಿಲುಗಳನ್ನು ಹತ್ತಿ ದರ್ಶನ ಪಡೆದರು. ನಂತರ ಅರ್ಚಕರಿಂದ ವಿಶೇಷ ಪೂಜೆ ಸಲ್ಲಿಸಿ ಕೆಳಗಿಳಿದರು.
ಈ ವೇಳೆ ದೇವಸ್ಥಾನದ ವ್ಯವಸ್ಥಾಪಕ ವೆಂಕಟೇಶ ಮಡಿವಾಳ, ಪೊಲೀಸ್ ಸಿಬ್ಬಂದಿ ಶ್ರೀನಿವಾಸ ಹಾಗೂ ದೇವಸ್ಥಾನ ಆಡಳಿತ ಮಂಡಳಿ ಸದಸ್ಯರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.