
ರೆಂಜಾಳ ರಾಮಕೃಷ್ಣ ರಾವ್
ಬೆಂಗಳೂರು: ಕರ್ನಾಟಕ ಯಕ್ಷಗಾನ ಅಕಾಡೆಮಿಯ 2025ನೇ ಸಾಲಿನ ಪ್ರಶಸ್ತಿಗಳನ್ನು ಪ್ರಕಟ ಮಾಡಲಾಗಿದೆ.
ಅಕಾಡೆಮಿಯ ಗೌರವ ಪ್ರಶಸ್ತಿಗೆ ರೆಂಜಾಳ ರಾಮಕೃಷ್ಣ, ವಿಷ್ಣು ಆಚಾರಿ ಬಳಕೂರು, ಡಿ.ಮನೋಹರ್ ಕುಮಾರ್, ಮುರಲಿ ಕಡೆಕಾರ್, ರಮೇಶ್ ಅವರನ್ನು ಆಯ್ಕೆ ಮಾಡಲಾಗಿದೆ. ಈ ಪುರಸ್ಕಾರವು ₹50 ಸಾವಿರ ನಗದನ್ನು ಒಳಗೊಂಡಿದೆ ಎಂದು ಅವರು ಹೇಳಿದ್ದಾರೆ.
ಯಕ್ಷಸಿರಿ ವಾರ್ಷಿಕ ಪ್ರಶಸ್ತಿಗೆ ದಾಸನಡ್ಕ ರಾಮ ಕುಲಾಲ್, ರಾಜೀವ ಶೆಟ್ಟಿ ಹೊಸಂಗಡಿ, ದಾಸಪ್ಪಗೌಡ ಗೇರುಕಟ್ಟೆ, ಶ್ರೀನಿವಾಸ್ ಸಾಲ್ಯಾನ್, ಸದಾಶಿವ ಕುಲಾಲ್, ಬೆಳ್ಳಾರೆ ಮಂಜುನಾಥ ಭಟ್, ಕೇಶವ ಶಕ್ತಿನಗರ, ಲಕ್ಷ್ಮಣಗೌಡ ಬೆಳಾಲ್, ಸಣ್ಣ ಮಲ್ಲಯ್ಯ, ಎ.ಜಿ.ನಾಗರಾಜು ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ₹25 ಸಾವಿರ ನಗದನ್ನು ಒಳಗೊಂಡಿದೆ ಎಂದರು.
ಕರ್ಕಿ ಹಿರಿಯ ಪರಮಯ್ಯ ಹಾಸ್ಯಗಾರ ದತ್ತಿನಿಧಿ ಪ್ರಶಸ್ತಿಗೆ ದೇವದಾಸ ರಾವ್ ಕೊಡ್ಲಿ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ₹ 25 ಸಾವಿರ ನಗದನ್ನು ಒಳಗೊಂಡಿದೆ ಎಂದರು.
ಪುಸ್ತಕ ಬಹುಮಾನ ಪ್ರಶಸ್ತಿಗೆ ಅಶೋಕ ಹಾಸ್ಯಗಾರ, ಕೆರೆಮನೆ ಶಿವಾನಂದ ಹೆಗಡೆ, ಮಣಿಪಾಲ್ ಯೂನಿವರ್ಸಲ್ ಪ್ರೆಸ್ ಅನ್ನು ಆಯ್ಕೆ ಮಾಡಲಾಗಿದೆ.
‘ಪಾರ್ತಿಸುಬ್ಬ ಪ್ರಶಸ್ತಿ’ಗೆ ಸಮಿತಿಯಲ್ಲಿ ಆಯ್ಕೆ ಮಾಡಲಾಗಿದ್ದ ಕಲಾವಿದರು ನಿಧನ ಹೊಂದಿರುವ ಕಾರಣಕ್ಕೆ ಮುಂದಿನ ಸಭೆಯಲ್ಲಿ ತೀರ್ಮಾನಿಸಿ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ಅಕಾಡೆಮಿ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.