ADVERTISEMENT

ಬಲಿಪ ನಾರಾಯಣ ಭಾಗವತ ನಿಧನಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಸಂತಾಪ

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2023, 2:08 IST
Last Updated 17 ಫೆಬ್ರುವರಿ 2023, 2:08 IST
ಬಲಿಪ ನಾರಾಯಣ ಭಾಗವತ
ಬಲಿಪ ನಾರಾಯಣ ಭಾಗವತ   

ಬೆಂಗಳೂರು: ತೆಂಕು ತಿಟ್ಟಿನ ಹೆಸರಾಂತ ಭಾಗವತ ಬಲಿಪ ನಾರಾಯಣ ಭಾಗವತ (85) ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂತಾಪ ಸೂಚಿಸಿದ್ದಾರೆ. ನಾರಾಯಣ ಭಾಗವತರು ತೆಂಕು ತಿಟ್ಟು ಯಕ್ಷ ರಂಗದ ಭೀಷ್ಮ ಎಂದೇ ಖ್ಯಾತರಾಗಿದ್ದಾರೆ.

ಕಾಸರಗೋಡು ಜಿಲ್ಲೆಯ ಪಡ್ರೆ ಗ್ರಾಮದಲ್ಲಿ 1938ರ ಮಾರ್ಚ್ 13ರಂದು ಜನಿಸಿದ್ದ ನಾರಾಯಣ ಭಾಗವತರು ಬಲಿಪ ಮಾಧವ ಭಟ್ ಮತ್ತು ತಾಯಿ ಸರಸ್ವತಿ ದಂಪತಿಯ ಪುತ್ರ. ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ತಾಲ್ಲೂಕಿನ ಮಾರೂರು ನೂಯಿಯಲ್ಲಿ ವಾಸವಿದ್ದರು.

ನಾರಾಯಣ ಅವರ ನಿಧನ ಸಂಬಂಧ ಟ್ವೀಟ್‌ ಮಾಡಿರುವ ಬೊಮ್ಮಾಯಿ, 'ತೆಂಕು ತಿಟ್ಟು ಯಕ್ಷರಂಗದ ಭೀಷ್ಮ ಎಂದೇ ಖ್ಯಾತರಾಗಿದ್ದ ಬಲಿಪ ನಾರಾಯಣ ಭಾಗವತರ ನಿಧನದ ಸುದ್ದಿ ತಿಳಿದು ಅತ್ಯಂತ ದುಃಖವಾಯಿತು. ತಮ್ಮ ಕಂಚಿನ ಕಂಠದ ಬಲಿಪ ಶೈಲಿಯ ಹಾಡುಗಾರಿಕೆಗೆ ಪ್ರಸಿದ್ಧರಾಗಿದ್ದ ಭಾಗವತರ ನಿಧನದಿಂದ ಯಕ್ಷ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ದೇವರು ಅವರ ಆತ್ಮಕ್ಕೆ ಸದ್ಗತಿ ನೀಡಲೆಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿಃ' ಎಂದು ಸಂತಾಪ ಸೂಚಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.