ಮಾಂಬಾಡಿ ಸುಬ್ರಹ್ಮಣ್ಯ ಭಟ್
ಉಡುಪಿ: ಕರ್ನಾಟಕ ಯಕ್ಷಗಾನ ಅಕಾಡೆಮಿಯ 2024ನೇ ಸಾಲಿನ ಪ್ರಶಸ್ತಿಗಳು ಪ್ರಕಟವಾಗಿದ್ದು, ಪಾರ್ತಿಸುಬ್ಬ ಪ್ರಶಸ್ತಿಗೆ ಹಿಮ್ಮೇಳ ವಾದಕ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆಯಾಗಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ಪ್ರಶಸ್ತಿ ಪಟ್ಟಿ ಬಿಡುಗಡೆ ಮಾಡಿದ ಅಕಾಡೆಮಿ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ, ಪಾರ್ತಿಸುಬ್ಬ ಪ್ರಶಸ್ತಿಯು ₹1 ಲಕ್ಷ ನಗದನ್ನು ಒಳಗೊಂಡಿದೆ ಎಂದರು.
ಅಕಾಡೆಮಿಯ ಗೌರವ ಪ್ರಶಸ್ತಿಗೆ ಕೊಳ್ತಿಗೆ ನಾರಾಯಣ ಗೌಡ, ಕೋಡಿ ವಿಶ್ವನಾಥ ಗಾಣಿಗ, ರಾಘವ ದಾಸ್, ಸುಬ್ರಾಯ ಹೊಳ್ಳ, ಕಾಂತರಾಜು ಅವರನ್ನು ಆಯ್ಕೆ ಮಾಡಲಾಗಿದೆ. ಈ ಪುರಸ್ಕಾರವು ₹50 ಸಾವಿರ ನಗದನ್ನು ಒಳಗೊಂಡಿದೆ ಎಂದು ಹೇಳಿದರು.
ಯಕ್ಷಸಿರಿ ವಾರ್ಷಿಕ ಪ್ರಶಸ್ತಿಗೆ ಅಡ್ಕ ಗೋಪಾಲಕೃಷ್ಣ ಭಟ್, ಜಗನ್ನಾಥ ಆಚಾರ್ಯ ಎಳ್ಳಂಪಳ್ಳಿ, ಮವ್ವಾರು ಬಾಲಕೃಷ್ಣ ಮಣಿಯಾಣಿ, ಉಮೇಶ್ ಕುಪ್ಪೆಪದವು, ಶಿವಾನಂದ ಗೀಜಗಾರು, ಮುಗ್ವಾ ಗಣೇಶ್ ನಾಯ್ಕ, ಸುರೇಂದ್ರ ಮಲ್ಲಿ, ಅಂಡಾಲ ದೇವಿಪ್ರಸಾದ ಶೆಟ್ಟಿ, ಕೃಷ್ಣಪ್ಪ, ಹಳುವಳ್ಳಿ ಜ್ಯೋತಿ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ₹25 ಸಾವಿರ ನಗದನ್ನು ಒಳಗೊಂಡಿದೆ ಎಂದರು.
ಕರ್ಕಿ ಹಿರಿಯ ಪರಮಯ್ಯ ಹಾಸ್ಯಗಾರ ದತ್ತಿನಿಧಿ ಪ್ರಶಸ್ತಿಗೆ ಕರ್ಗಲ್ಲು ವಿಶ್ವೇಶ್ವರ ಭಟ್ಟ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ₹ 25 ಸಾವಿರ ನಗದನ್ನು ಒಳಗೊಂಡಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಅಕಾಡೆಮಿ ರಿಜಿಸ್ಟ್ರಾರ್ ನಮ್ರತ ಎನ್ ಮತ್ತು ಸದಸ್ಯರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.