ADVERTISEMENT

ಯಂತ್ರಧಾರೆ ಯೋಜನೆ ರೈತರಿಗೆ -ಬಿ.ಸಿ. ಪಾಟೀಲ್‌

​ಪ್ರಜಾವಾಣಿ ವಾರ್ತೆ
Published 23 ಡಿಸೆಂಬರ್ 2022, 21:45 IST
Last Updated 23 ಡಿಸೆಂಬರ್ 2022, 21:45 IST
ಬಿ.ಸಿ. ಪಾಟೀಲ್‌
ಬಿ.ಸಿ. ಪಾಟೀಲ್‌   

ಬೆಳಗಾವಿ: ಕೃಷಿ ಯಂತ್ರಧಾರೆ ಯೋಜನೆಯನ್ನು ರೈತ ಉತ್ಪಾದಕ ಸಂಸ್ಥೆಗಳಿಗೆ (ಎಫ್‌ಪಿಒ) ವಹಿಸಲು ಚಿಂತನೆ ನಡೆಸಲಾಗಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್‌ ತಿಳಿಸಿದರು

ವಿಧಾನ ಪರಿಷತ್‌ನಲ್ಲಿ ಶುಕ್ರವಾರ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ಪಿ.ಎಂ. ಮುನಿರಾಜು ಅವರ ಪ್ರಶ್ನೆಗೆ ಉತ್ತರಿಸಿದ ಅವರು, ’ರಾಜ್ಯದಲ್ಲಿ ಪ್ರಸ್ತುತ 689 ಕೃಷಿ ಯಂತ್ರಧಾರೆ ಕೇಂದ್ರಗಳಿವೆ. ಇನ್ನೂ ಹೋಬಳಿಗೊಂದು ಯಂತ್ರಧಾರೆ ಕೇಂದ್ರ ತೆರೆಯಬೇಕಾಗಿದೆ. ಆದರೆ, ಈಗ ಬಹುತೇಕ ಕೆಂದ್ರಗಳ ಮೇಲ್ವಿಚಾರಣೆ ವಹಿಸಿಕೊಂಡಿದ್ದ ಸಂಸ್ಥೆಗಳ ಒಪ್ಪಂದದ ಅವಧಿ ಮುಗಿದಿದೆ. ಇದನ್ನು ಮುಂದುವರಿಸಲು ಸಂಸ್ಥೆಗಳು ಅಸಕ್ತಿ ವಹಿಸುತ್ತಿಲ್ಲ. ಹೀಗಾಗಿ, ಇನ್ನು ಮುಂದೆ ಈ ಕೇಂದ್ರಗಳನ್ನು ರೈತ ಉತ್ಪಾದಕ ಸಂಸ್ಥೆಗಳಿಗೆ ವಹಿಸಲು ಚಿಂತನೆ ನಡೆಸಲಾಗುತ್ತಿದೆ‘ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT