ಎಚ್.ಡಿ.ಕುಮಾರಸ್ವಾಮಿ ಹಾಗೂ ಯತೀಂದ್ರ ಸಿದ್ದರಾಮಯ್ಯ
ಮೈಸೂರು: ನಾನಾಗಲಿ, ನಮ್ಮ ತಂದೆಯಾಗಲೀ ವರ್ಗಾವಣೆ ದಂದೆಯಲ್ಲಿ ತೊಡಗಿಲ್ಲ. ಒಬ್ಬ ಮುಖ್ಯಮಂತ್ರಿ ಮೇಲೆ ಆರೋಪ ಮಾಡಬೇಕಾದರೆ ಸಾಕ್ಷ್ಯ ಇಟ್ಟುಕೊಂಡು ಮಾತನಾಡಿ ಎಂದು ಕಾಂಗ್ರೆಸ್ ಮುಖಂಡ ಯತೀಂದ್ರ ಸಿದ್ದರಾಮಯ್ಯ ಕುಮಾರಸ್ವಾಮಿಗೆ ತಿರುಗೇಟು ನೀಡಿದರು.
ನಗರದಲ್ಲಿ ಶನಿವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು ' ಇನ್ ಸ್ಪೆಕ್ಟರ್ ವಿವೇಕಾನಂದ ಯಾರೆಂಬುದೇ ನನಗೆ ಗೊತ್ತಿಲ್ಲ. ಅವರ ವರ್ಗಾವಣೆಗೂ ನನಗೂ ಸಂಬಂಧ ಇಲ್ಲ. ವಿಪಕ್ಷಗಳು ಹತಾಶರಾಗಿ ಟೀಕೆ ಮಾಡುತ್ತಿವೆ' ಎಂದರು.
'ಕುಮಾರಸ್ವಾಮಿ ಕೂಡ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದಾರೆ. ಇವರು ಅಧಿಕಾರದಲ್ಲಿದ್ದಾಗ ದಂದೆಯನ್ನೇ ಮಾಡುತ್ತಿದ್ದರಾ?' ಎಂದು ಪ್ರಶ್ನಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.