ಯತೀಂದ್ರ ಸಿದ್ದರಾಮಯ್ಯ
ಮೈಸೂರು: ‘ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರ ಬಗ್ಗೆ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ‘ಆ’ ಮಾತು ಹೇಳಿದ್ದು ಸತ್ಯ. ನಾನೇ ಅದನ್ನು ಕೇಳಿಸಿಕೊಂಡು ಒಂದು ಕ್ಷಣ ಗಾಬರಿಯಾದೆ. ಏನಿದು, ಇಂಥ ಪದಗಳನ್ನು ಬಳಸುತ್ತಿದ್ದಾರಲ್ಲಾ ಎಂದುಕೊಂಡೆ’ ಎಂದು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ಇಲ್ಲಿ ಪತ್ರಕರ್ತರ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯಿಸಿದ ಅವರು, ‘ನಾನು ಆ ಪದವನ್ನು ಬಳಸಿಯೇ ಇಲ್ಲ ಎಂದು ರವಿ ಹೇಳುತ್ತಿದ್ದಾರೆ. ಅವರು ಬಳಸಿದ್ದು ಫ್ರಸ್ಟ್‌ರೇಟ್ ಎಂಬ ಪದವಲ್ಲ. ಅವರು ಬಳಸಿದ್ದು ಅಶ್ಲೀಲ ಪದ. ಅದಕ್ಕೆ ನಾನೇ ಸಾಕ್ಷಿ. ಈಗ ಅನುಕಂಪ ಗಿಟ್ಟಿಸಿಕೊಳ್ಳಲು ರವಿ ನಾಟಕ ಮಾಡುತ್ತಿದ್ದಾರೆ. ಬಿಜೆಪಿಯವರಿಗೆ ಮಾನ– ಮರ್ಯಾದೆ ಏನಿಲ್ಲ. ಹೀಗಾಗಿ ಅವರು ರವಿ ಪರ ನಿಂತಿದ್ದಾರೆ’ ಎಂದು ಆರೋಪಿಸಿದರು.
‘ರವಿ ಎನ್‌ಕೌಂಟರ್‌ಗೆ ಪೊಲೀಸರು ಯತ್ನಿಸಿದರು, ಕೊಲೆಗೆ ಯತ್ನ ನಡೆದಿತ್ತು ಎಂಬುದೆಲ್ಲಾ ಶುದ್ಧ ನಾಟಕ. ಬಿಜೆಪಿಯವರು ಈ ವಿಚಾರದಲ್ಲಿ ನೀಡುತ್ತಿರುವ ಹೇಳಿಕೆಗಳೆಲ್ಲಾ ಕೇವಲ ನಾಟಕ’ ಎಂದು ಟೀಕಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.