ಸಚಿವ ವೆಂಕಟೇಶ್, ಯತೀಂದ್ರ ಸಿದ್ದರಾಮಯ್ಯ,
ಚಾಮರಾಜನಗರ: ಲೋಕಸಭಾ ಚುನಾವಣೆಯಲ್ಲಿ ಯತೀಂದ್ರ ಸಿದ್ದರಾಮಯ್ಯ ಅವರು ಮೈಸೂರು ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ ಎಂದು ರೇಷ್ಮೆ ಮತ್ತು ಪಶು ಸಂಗೋಪನೆ ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಹೇಳಿದರು.
ನಗರದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ನನಗೆ ಗೊತ್ತಿರುವ ಮಾಹಿತಿ ಪ್ರಕಾರ ಯತೀಂದ್ರ ಸ್ಪರ್ಧಿಸುವುದಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಇದನ್ನೇ ಹೇಳಿದ್ದಾರೆ ಎಂದರು.
ಆದರೆ ಬಿಜೆಪಿಯರು ಪದೇ ಪದೇ ಯತೀಂದ್ರ ಹೆಸರು ಪ್ರಸ್ತಾಪಿಸುತ್ತಿದ್ದಾರಲ್ಲ ಎಂದು ಕೇಳಿದ್ದಕ್ಕೆ, ‘ಬಿಜೆಪಿಯರಿಗೆ ಅದು ಚಟ’ ಎಂದು ಹೇಳಿದರು.
ಅನಂತಕುಮಾರ ಹೆಗಡೆ ಸಂಸ್ಕಾರ ಇಲ್ಲದ ಮನುಷ್ಯ
ಲೋಕಸಭಾ ಚುನಾವಣೆಯಲ್ಲಿ ಸಚಿವರು ಸ್ಪರ್ಧಿಸುವ ಕುರಿತಂತೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ನನಗೆ ಈ ಬಗ್ಗೆ ಗೊತ್ತಿಲ್ಲ. ನಾನು ಸ್ಪರ್ಧಿಸುವುದಿಲ್ಲ. ಕಳೆದ ವಿಧಾನಸಭಾ ಚುನಾವಣೆಯೇ ನನ್ನ ಕೊನೆಯ ಚುನಾವಣೆ. ವಯಸ್ಸು ಬೇರೆ ಆಗಿದೆ. ಇನ್ನು ಮುಂದೆ ಸ್ಪರ್ಧಿಸುವುದಿಲ್ಲ’ ಎಂದರು.
ಉತ್ತರ ಕನ್ನಡ ಸಂಸದ ಅವರು ಮುಖ್ಯಮಂತ್ರಿ ಬಗ್ಗೆ ಅನಂತಕುಮಾರ ಹೆಗಡೆ ಅವರ ಹೇಳಿಕೆಗೆ ಬಗ್ಗೆ ಪ್ರತಿಕ್ರಿಯಿಸಿದ ಕೆ.ವೆಂಕಟೇಶ್, ‘ಆತ ಸಂಸ್ಕಾರ ಇಲ್ಲದ ಮನುಷ್ಯ. ನಾವು ಏನು ಹೇಳುವುದು’ ಎಂದು ಪ್ರಶ್ನಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.