ಬಸನಗೌಡ ಪಾಟೀಲ ಯತ್ನಾಳ ( ಸಂಗ್ರಹ ಚಿತ್ರ)
ಬೆಂಗಳೂರು: ಹೈಕೋರ್ಟ್ ಆದೇಶ ಪಾಲಿಸದ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮಂಗಳವಾರ ರಾತ್ರಿ ಪ್ರತಿಭಟನೆ ನಡೆಸಿದರು.
ಎಥೆನಾಲ್ ಉತ್ಪಾದನೆ ವಿಚಾರವಾಗಿ ನಿಯಮ ಉಲ್ಲಂಘನೆ ಆರೋಪದಲ್ಲಿ ಕಲಬುರಗಿ ಜಿಲ್ಲೆಯ ಚಿಂಚೋಳಿಯ ಸಿದ್ದಸಿರಿ ಸಕ್ಕರೆ ಕಾರ್ಖಾನೆ ಮುಚ್ಚುವಂತೆ ಮಂಡಳಿ ನೋಟಿಸ್ ನೀಡಿತ್ತು.
ನೋಟಿಸ್ ಪ್ರಶ್ನಿಸಿ ಯತ್ನಾಳ ಹೈಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಕಾರ್ಖಾನೆ ತೆರೆಯಲು ಅನುಮತಿ ನೀಡಿತು. ಆದರೆ ಹೈಕೋರ್ಟ್ ಆದೇಶ ಪಾಲಿಸದೆ ಮಂಡಳಿ ಮೇಲ್ಮನವಿ ಸಲ್ಲಿಸಲು ಸಿದ್ಧತೆ ನಡೆಸಿತ್ತು.
ಇದನ್ನು ವಿರೋಧಿಸಿ ಯತ್ನಾಳ, ಕಚೇರಿಗೆ ಬಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಕಚೇರಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರನ್ನು ಕರೆಸಿ ಕೊಂಡರು. ಬಳಿಕ ಅಧಿಕಾರಿಗಳ ಜತೆ ಮಾತುಕತೆ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.