ಬೆಂಗಳೂರು: ನಿರುದ್ಯೋಗಿ ಪದವೀಧರರಿಗೆ ಮಾಸಿಕ ಭತ್ಯೆ ನೀಡುವ ‘ಯುವನಿಧಿ’ ಯೋಜನೆಗೆ ಇಂದು (ಮಂಗಳವಾರ) ಚಾಲನೆ ದೊರಕಿದೆ.
ಇದರ ಬೆನ್ನಲ್ಲೇ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ನಮ್ಮದು ಪಕೋಡಾ ಮಾರಿ ಎನ್ನುವ ಬಿಜೆಪಿ ಸಿದ್ಧಾಂತವಲ್ಲ’ ಎಂದು ‘ಎಕ್ಸ್’ನಲ್ಲಿ ಬರೆದುಕೊಂಡಿದೆ.
‘ನಮ್ಮ ಐದನೇ ಗ್ಯಾರಂಟಿಯೂ ಜಾರಿಯಾಯ್ತು. ರಾಜ್ಯದ ನಿರುದ್ಯೋಗಿ ಯುವ ಸಮುದಾಯಕ್ಕೆ ಆರ್ಥಿಕ ನೆರವು ನೀಡುವ ಯುವನಿಧಿ ಯೋಜನೆಗೆ ಚಾಲನೆ ನೀಡಿ ನುಡಿದಂತೆ ನಡೆದಿದ್ದೇವೆ. ನಮ್ಮದು ಉದ್ಯೋಗ ಕೇಳಿದ ಯುವಕರಿಗೆ ಪಕೋಡ ಮಾರಿ ಎನ್ನುವ ಬಿಜೆಪಿ ಸಿದ್ಧಾಂತವಲ್ಲ. ಯುವ ಸಬಲೀಕರಣದ ಸಿದ್ದಾಂತ’ ಎಂದು ಕಾಂಗ್ರೆಸ್ ಹೇಳಿದೆ.
ಮಾನವ ಸಂಪನ್ಮೂಲದ ಸದ್ಬಳಕೆಗೆ ಉದ್ಯೋಗ ಸೃಷ್ಟಿಸುವುದು ಹಾಗೂ ಆರ್ಥಿಕ ಸಂಕಷ್ಟದಲ್ಲಿರುವ ಯುವ ಸಮುದಾಯದ ನೆರವಿಗೆ ನಿಲ್ಲುವುದು ನಮ್ಮ ಆದ್ಯತೆ ಎಂದು ಕಾಂಗ್ರೆಸ್ ಬರೆದುಕೊಂಡಿದೆ.
ಯುವನಿಧಿ ಯೋಜನೆಗೆ ನೋಂದಣಿ ಮಾಡುವ ಮೂಲಕ ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ಭರವಸೆ ನೀಡಿದ್ದ ಐದೂ ಗ್ಯಾರಂಟಿಗಳನ್ನು ಜಾರಿಗೆ ತಂದಂತಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.