ADVERTISEMENT

ಕುತೂಹಲ ಮೂಡಿಸಿದೆ ಬಿಎಸ್‌ವೈ ದಿಢೀರ್‌ ಸುದ್ದಿಗೋಷ್ಠಿ 

ಏಜೆನ್ಸೀಸ್
Published 1 ಜುಲೈ 2019, 4:05 IST
Last Updated 1 ಜುಲೈ 2019, 4:05 IST
   

ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್‌ ಯಡಿಯೂರಪ್ಪ ಅವರು ಇಂದು(ಜುಲೈ 1)ದಿಢೀರ್‌ ಸುದ್ದಿಗೋಷ್ಠಿ ಕರೆದಿದ್ದು, ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ.

ಇಂದು ಮಧ್ಯಾಹ್ನ 12 ಗಂಟೆಗೆ ವಿಧಾನಸೌಧದ ತಮ್ಮ ಕಚೇರಿಯಲ್ಲಿಸುದ್ದಿಗೋಷ್ಠಿ ನಡೆಸಲಿದ್ದಾರೆ ಎಂದು ರಾಜ್ಯ ಬಿಜೆಪಿ ಮಾಧ್ಯಮಗಳಿಗೆ ತಿಳಿಸಿದೆ. ಈ ಮಧ್ಯೆ ಆನಂದ್‌ ಸಿಂಗ್‌ ಕೇಂದ್ರ ಬಿಜೆಪಿ ನಾಯಕರನ್ನು ಭೇಟಿಯಾಗಿ ಬಂದಿದ್ದು, ಶಾಸಕ ಸ್ಥಾನಕ್ಕೆರಾಜೀನಾಮೆ ನೀಡುವ ಸಾಧ್ಯತೆಗಳಿವೆ ಎಂದು ರಾಜಕೀಯ ವಲಯದಲ್ಲಿ ಚರ್ಚೆ ಆರಂಭವಾಗಿದೆ. ಇಂಥ ಸಂದರ್ಭದಲ್ಲಿ ಬಿಎಸ್‌ವೈ ಕರೆದಿರುವ ಸುದ್ದಿಗೋಷ್ಠಿಯು ಸಾಕಷ್ಟು ಮಹತ್ವ ಪಡೆದುಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT