ADVERTISEMENT

ಬಿಎಸ್‌ವೈ ದಿಢೀರ್‌ ದೆಹಲಿಗೆ: ಸಂಪುಟ ವಿಸ್ತರಣೆ ಚರ್ಚೆ?

​ಪ್ರಜಾವಾಣಿ ವಾರ್ತೆ
Published 9 ಜನವರಿ 2021, 16:59 IST
Last Updated 9 ಜನವರಿ 2021, 16:59 IST
ಬಿ.ಎಸ್‌ ಯಡಿಯೂರಪ್ಪ
ಬಿ.ಎಸ್‌ ಯಡಿಯೂರಪ್ಪ    

ಬೆಂಗಳೂರು: ಇದೇ 16ರಿಂದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ರಾಜ್ಯ ಪ್ರವಾಸ ನಿಗದಿಯಾಗಿರುವ ಮಧ್ಯೆಯೇ, ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಪಕ್ಷದ ವರಿಷ್ಠರ ಭೇಟಿಗೆ ಭಾನುವಾರ (ಜ.10) ದಿಢೀರ್‌ ದೆಹಲಿಗೆ ಹೊರಟಿರುವುದು ಸಂಪುಟ ವಿಸ್ತರಣೆ ಕುರಿತ ಚರ್ಚೆಗೆ ಗ್ರಾಸವಾಗಿದೆ.

‘ಭಾನುವಾರ ಬೆಳಿಗ್ಗೆ ಕೇಂದ್ರ ಸಚಿವರ ಭೇಟಿಗೆ ಮುಖ್ಯಮಂತ್ರಿ ದೆಹಲಿ ತೆರಳಲಿದ್ದಾರೆ ಎಂದು ಪ್ರವಾಸ ಪಟ್ಟಿಯಲ್ಲಿ ನಮೂದಿಸಲಾಗಿದೆ. ಆದರೆ, ಅವರು ಪಕ್ಷದ ವರಿಷ್ಠರನ್ನು ಭೇಟಿ ಮಾಡಿ ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಸುವ ಸಾಧ್ಯತೆಗಳಿವೆ’ ಎಂದು ಮುಖ್ಯಮಂತ್ರಿ ಸಚಿವಾಲಯದ ಮೂಲಗಳು ಹೇಳಿವೆ.

‘ಬೆಳಿಗ್ಗೆ 11 ಗಂಟೆಗೆ ದೆಹಲಿ ತಲುಪಲಿರುವ ಮುಖ್ಯಮಂತ್ರಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಅಮಿತ್ ಶಾ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಸಂಪುಟ ವಿಸ್ತರಣೆಗೆ ಒತ್ತಡ ಹೆಚ್ಚಿದೆ. ಹೀಗಾಗಿ, ಈ ಇಬ್ಬರನ್ನೂ ಭೇಟಿ ಮಾಡಿ ಸಂಪುಟ ವಿಸ್ತರಣೆಗೆ ಒಪ್ಪಿಗೆ ಪಡೆಯುವ ಸಾಧ್ಯತೆ ಇದೆ. ಅಲ್ಲದೆ ಯಾರನ್ನೆಲ್ಲ ಸಂಪುಟಕ್ಕೆ ಸೇರಿಸಿಕೊಳ್ಳಬೇಕೆಂಬ ಬಗ್ಗೆಯೂ ಚರ್ಚಿಸುವ ಸಾಧ್ಯತೆ ಇದೆ’ ಎಂದೂ ಮೂಲ
ಗಳು ಹೇಳಿವೆ. ಶನಿವಾರ ರಾತ್ರಿ 7 ಗಂಟೆಯ ಬಳಿಕ ದೆಹಲಿಗೆ ಪ್ರವಾಸ ನಿಗದಿಯಾಗಿದೆ. ಹೀಗಾಗಿ, ವರಿಷ್ಠರಿಂದ ಕರೆ ಬಂದ ಕಾರಣಕ್ಕೆ ಯಡಿಯೂರಪ್ಪ ದೆಹಲಿಗೆ ಹೊರಟಿದ್ದಾರೆಯೇ ಎಂಬ ಬಗ್ಗೆ ಖಚಿತವಾಗಿಲ್ಲ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.