ADVERTISEMENT

ಯಡಿಯೂರಪ್ಪ, ನಡ್ಡಾ ಸಭೆ ಅಂತ್ಯ: ಸಂಪುಟ ವಿಸ್ತರಣೆ 4 ದಿನಗಳಲ್ಲಿ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 18 ನವೆಂಬರ್ 2020, 12:34 IST
Last Updated 18 ನವೆಂಬರ್ 2020, 12:34 IST
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ  ಜೆ.ಪಿ. ನಡ್ಡಾ ಅವರನ್ನು ನವದೆಹಲಿಯಲ್ಲಿಂದು ಭೇಟಿ ಮಾಡಿದರು. ಡಿಸಿಎಂ ಗೋವಿಂದ ಕಾರಜೋಳ ಉಪಸ್ಥಿತರಿದ್ದರು.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ನವದೆಹಲಿಯಲ್ಲಿಂದು ಭೇಟಿ ಮಾಡಿದರು. ಡಿಸಿಎಂ ಗೋವಿಂದ ಕಾರಜೋಳ ಉಪಸ್ಥಿತರಿದ್ದರು.   

ನವದೆಹಲಿ: ಸಚಿವ‌ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆಕುರಿತು ನಾಲ್ಕು ದಿನಗಳಲ್ಲಿ ಅಂತಿಮ ನಿರ್ಧಾರ‌ ತಿಳಿಸುವುದಾಗಿ ಬಿಜೆಪಿ ಹೈಕಮಾಂಡ್, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ತಿಳಿಸಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ‌ ಜೆ.ಪಿ.‌ ನಡ್ಡಾ ಅವರೊಂದಿಗೆ ಬುಧವಾರ ಸಂಜೆ ಈ ಕುರಿತು ನಡೆಸಲಾದ ಸಭೆಯ ಬಳಿಕ ಮಾತನಾಡಿದ ಯಡಿಯೂರಪ್ಪ, ನಾಲ್ಕೈದು ದಿನಗಳಲ್ಲಿನಡ್ಡಾ ಅವರು ಈ ಸಂಬಂಧ ನಿರ್ಧಾರ‌ ತಿಳಿಸುವುದಾಗಿ ಹೇಳಿದರು.

ಪಕ್ಷದ ರಾಜ್ಯ ಹಾಗೂ ರಾಷ್ಟ್ರೀಯ ಮುಖಂಡರ ಜೊತೆ ಮಾತುಕತೆ ನಡೆಸಿದ‌ ಬಳಿಕ ಸಂಪುಟಕ್ಕೆ ಸೇರ್ಪಡೆ ಆಗುವವರ‌ ಪಟ್ಟಿಯನ್ನು ಕಳುಹಿಸಿಕೊಡುವುದಾಗಿ ನಡ್ಡಾ ತಿಳಿಸಿದ್ದಾರೆ ಎಂದು ಅವರು ಹೇಳಿದರು.

ADVERTISEMENT

ಕೇಂದ್ರದ ಗೃಹ ಸಚಿವ ಅಮಿತ್ ‌ಶಾ ಅವರ ಭೇಟಿಗೆ ಯಡಿಯೂರಪ್ಪ ಪ್ರಯತ್ನಿಸಿದರಾದರೂ ಅವಕಾಶ‌ ಸಿಗಲಿಲ್ಲ ಎನ್ನಲಾಗಿದೆ.

ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಯಡಿಯೂರಪ್ಪ ಒಲವು ತೋರಿದ್ದು, ಹೈಕಮಾಂಡ್ ಅದಕ್ಕೆ ಒಲವು ತೋರಿಲ್ಲ ಎನ್ನಲಾಗಿದೆ.

ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ದೆಹಲಿಯಲ್ಲಿದ್ದರೂ ಯಡಿಯೂರಪ್ಪ ಅವರನ್ನು ಭೇಟಿ ಮಾಡಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.