ಬೆಂಗಳೂರು: ‘ರಾಜ್ಯದಲ್ಲಿಮಧ್ಯಂತರ ಚುನಾವಣೆ ನಿಶ್ಚಿತ’ ಎನ್ನುವದೇವೇಗೌಡರ ಹೇಳಿಕೆಯನ್ನು ಆಕ್ಷೇಪಿಸಿರುವ ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ ‘ಯೋಗ್ಯತೆ ಇಲ್ಲದಿದ್ರೆ ಅಧಿಕಾರ ಬಿಟ್ಟು ಹೊರಗೆ ಹೋಗಿ’ ಎಂದು ಗುಡುಗಿದ್ದಾರೆ.
‘ಅಧಿಕಾರ ನಡೆಸಲು ಕೈಲಾಗದೇ ಇದ್ದರೆ, ಯೋಗ್ಯತೆ ಇಲ್ಲದೇ ಇದ್ದರೆ ಅಧಿಕಾರ ಬಿಟ್ಟು ನಡೆಯಲಿ. ನಾವು ಸರ್ಕಾರ ರಚಿಸುತ್ತೇವೆ. ಚುನಾವಣೆ ಈಗ ಅನಗತ್ಯ’ ಎಂದು ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.
‘ಹಿರಿಯ ರಾಜಕಾರಣಿ ದೇವೇಗೌಡರು ಸತ್ಯವನ್ನೇ ಹೇಳಿದ್ದಾರೆ. ಸರ್ಕಾರ ಬೀಳಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದು ಒಂದು ವರ್ಷದಿಂದ ಹೇಳುತ್ತಿದ್ದರು. ಈಗ ಸತ್ಯ ರಾಜ್ಯದ ಜನರಿಗೆ ಗೊತ್ತಾಗಿದೆ. ಕಾಂಗ್ರೆಸ್ ನಾಯಕರು ಕಚ್ಚಾಟ, ಮೈತ್ರಿ ಪಕ್ಷ ದಲ್ಲಿ ಗೊಂದಲದಿಂದ ಸರ್ಕಾರ ಬೀಳಲಿದೆ ಎಂಬುದು ಗೌಡರ ಮಾತಿನಿಂದ ಸ್ಪಷ್ಟವಾಗುತ್ತದೆ’ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಲೇವಡಿ ಮಾಡಿದ್ದಾರೆ.
ಇನ್ನಷ್ಟು...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.