ADVERTISEMENT

ಉಪಚುನಾವಣೆ ಫಲಿತಾಂಶ ಟ್ರೆಂಡ್‌: ಯಡಿಯೂರಪ್ಪ ಸರ್ಕಾರ ಸೇಫ್‌

​ಪ್ರಜಾವಾಣಿ ವಾರ್ತೆ
Published 9 ಡಿಸೆಂಬರ್ 2019, 4:52 IST
Last Updated 9 ಡಿಸೆಂಬರ್ 2019, 4:52 IST
ಬಿ.ಎಸ್‌.ಯಡಿಯೂರಪ್ಪ
ಬಿ.ಎಸ್‌.ಯಡಿಯೂರಪ್ಪ   

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳಲ್ಲಿ ನಡೆದ ಉಪಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, 11ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.

ಉಳಿದಂತೆ ಕಾಂಗ್ರೆಸ್‌ 2, ಜೆಡಿಎಸ್‌ 1, ಪಕ್ಷೇತರರು1 ಒಂದು ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಆಡಳಿತಾರೂಢ ಬಿಜೆಪಿ ಹಾಗೂ ಉಪ ಚುನಾವಣಾ ಕಣದಲ್ಲಿರುವ 13 ಅನರ್ಹ ಶಾಸಕರ ಪಾಲಿಗೆ ಈ ದಿನ ನಿರ್ಣಾಯಕವಾಗಿದೆ.

ಈಗಾಗಲೇ 10ರಿಂದ 11ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಅಷ್ಟು ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲುವ ಸಾಧ್ಯತೆಗಳು ಹೆಚ್ಚಾಗಿದ್ದು, ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ಸರ್ಕಾರ ಸುರಕ್ಷಿತವಾಗಿರಲಿದೆ.

ಒಂದು ವೇಳೆಬಿಜೆಪಿ ಕನಿಷ್ಠ 6 ಕ್ಷೇತ್ರಗಳಲ್ಲಿ ಗೆಲ್ಲದೇ ಇದ್ದರೆ ಸರ್ಕಾರಕ್ಕೆ ಆಪತ್ತು ಖಚಿತ ಒಂದು ಹೇಳಲಾಗುತ್ತಿದೆ.

ಈಗಾಗಲೇ ಮಹಾಲಕ್ಷ್ಮಿ ಲೇಔಟ್‌ನ ಬಿಜೆಪಿ ಅಭ್ಯರ್ಥಿ ಗೋಪಾಲಯ್ಯ, ಯಲ್ಲಾಪುರದಲ್ಲಿ ಶಿವಾರಾಂ ಹೆಬ್ಬಾರ್‌, ಚಿಕ್ಕಬಳ್ಳಾಪುರದಲ್ಲಿ ಡಾ.ಸುಧಾಕರ್‌, ಗೋಕಾಕ್‌ನಲ್ಲಿ ರಮೇಶ್‌ ಜಾರಕಿಹೊಳಿಭಾರೀಮುನ್ನಡೆ ಸಾಧಿಸಿದ್ದಾರೆ.

ಇಂದು ಪ್ರಕಟವಾಗಲಿರುವ ಫಲಿತಾಂಶಕ್ಕಾಗಿ ಮೂರು ಪ್ರಮುಖ ರಾಜಕೀಯ ಪಕ್ಷಗಳ ನಾಯಕರು ಹಾಗೂ ರಾಜ್ಯದ ಮತದಾರರು ಕುತೂಹಲದಿಂದ ಕಾಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT