ADVERTISEMENT

ನಾಲ್ಕು ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್‌’ ಘೋಷಣೆ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2019, 19:53 IST
Last Updated 21 ಸೆಪ್ಟೆಂಬರ್ 2019, 19:53 IST

ಬೆಂಗಳೂರು: ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಸೆಪ್ಟೆಂಬರ್‌ 22ರಂದು ಹೆಚ್ಚು ಮಳೆಯಾಗಲಿದೆ. ಹೀಗಾಗಿ ಈ ಭಾಗದಲ್ಲಿ ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಸೋಮವಾರ ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ. ಕರಾವಳಿ, ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ.

ಶನಿವಾರ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ 3 ಸೆಂ.ಮೀ.ಮಳೆಯಾಗಿದೆ. ವಿರಾಜಪೇಟೆ 2, ಉಡುಪಿ, ಗುಡಿಬಂಡೆಯಲ್ಲಿ 1 ಸೆಂ.ಮೀ.ಮಳೆಯಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.