ADVERTISEMENT

9 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 19 ಜುಲೈ 2020, 19:31 IST
Last Updated 19 ಜುಲೈ 2020, 19:31 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿರುವುದರಿಂದ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಜುಲೈ 20 ಮತ್ತು 21ರಂದು ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸೋಮವಾರದಂದು ವ್ಯಾಪಕ ಮಳೆಯಾಗುವ ನಿರೀಕ್ಷೆ ಇರುವುದರಿಂದ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಮೀನುಗಾರರು ಕಡಲಿಗೆ ಇಳಿಯದಂತೆ ಇಲಾಖೆ ಎಚ್ಚರಿಸಿದೆ.

ADVERTISEMENT

ಮಳೆ-ಎಲ್ಲಿ, ಎಷ್ಟು?: ಕಾರವಾರ ಹಾಗೂ ಕುಂದಾಪುರದಲ್ಲಿ ಗರಿಷ್ಠ 13 ಸೆಂ.ಮೀ ಮಳೆಯಾಗಿದೆ. ಕಾರ್ಕಳ, ಗೋಕರ್ಣ, ಆಗುಂಬೆ 7, ದೊಡ್ಡಬಳ್ಳಾಪುರ 6, ಭಟ್ಕಳ, ಭಾಗಮಂಡಲ 5, ಉಪ್ಪಿನಂಗಡಿ, ಮೂಡುಬಿದರೆ, ಕಲಬುರ್ಗಿ, ಜಮಖಂಡಿ 3, ಮಂಗಳೂರು, ಹೊಸನಗರ, ಚಿಕ್ಕಬಳ್ಳಾಪುರ 2, ಪುತ್ತೂರು, ಮಡಿಕೇರಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.