ADVERTISEMENT

ಮುಂದಿನ ವರ್ಷದಿಂದ ಶಾಲೆ, ಕಾಲೇಜುಗಳಲ್ಲಿ ಯೋಗ ಶಿಕ್ಷಣ: ಮುಖ್ಯಮಂತ್ರಿ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 30 ಮೇ 2022, 1:24 IST
Last Updated 30 ಮೇ 2022, 1:24 IST
   

ಆನೇಕಲ್ (ಬೆಂಗಳೂರು ಗ್ರಾಮಾಂತರ ಜಿಲ್ಲೆ): ಮುಂದಿನ ಶೈಕ್ಷಣಿಕ ವರ್ಷದಿಂದ ಶಾಲೆ, ಕಾಲೇಜುಗಳಲ್ಲಿ ಯೋಗ ಶಿಕ್ಷಣ ಜಾರಿಗೆ ತರಲಾಗುವುದು ಎಂದುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇಲ್ಲಿಯ ಜಿಗಣಿಯ ಎಸ್‌-ವ್ಯಾಸ ಯೋಗ ವಿಶ್ವವಿದ್ಯಾಲಯದಲ್ಲಿ ಭಾನುವಾರ ಆಯೋಜಿಸಿದ್ದ 24ನೇ ಅಂತರರಾಷ್ಟ್ರೀಯ ಯೋಗ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಅವರು ಈ ವಿಷಯ ತಿಳಿಸಿದರು.

ವಿದ್ಯಾರ್ಥಿ ದಿಸೆಯಿಂದಲೇ ಒತ್ತಡ ಪರಿಸ್ಥಿತಿಯ ನಿರ್ವಹಣೆ ಕಲಿಸಲು ಮತ್ತು ಯೋಗದ ಮಹತ್ವ ತಿಳಿಸಲು 8ನೇ ತರಗತಿಯಿಂದ ಕಾಲೇಜು ಹಂತದವರೆಗೆ ಯೋಗ ಶಿಕ್ಷಣ ಜಾರಿಗೆ ತರಲಾಗುವುದು. ಈ ಬಗ್ಗೆ ತಜ್ಞರೊಂದಿಗೆ ಚರ್ಚಿಸಲಾಗುವುದು ಎಂದು
ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.