ADVERTISEMENT

ಯೋಗೀಶ್‌ ಗೌಡರ ಕೊಲೆ ಪ್ರಕರಣ: ವಿಚಾರಣೆಗೆ ಕಾಲಮಿತಿ ರದ್ದುಪಡಿಸಿದ ಸುಪ್ರೀಂ ಕೋರ್ಟ್

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2025, 16:05 IST
Last Updated 15 ಏಪ್ರಿಲ್ 2025, 16:05 IST
ಕ್ರಿಮಿನಲ್‌ ಪ್ರಕರಣ ವಿಚಾರಣೆಗೆ ಕಾಲಮಿತಿ
ಕ್ರಿಮಿನಲ್‌ ಪ್ರಕರಣ ವಿಚಾರಣೆಗೆ ಕಾಲಮಿತಿ   

ನವದೆಹಲಿ: ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್‌ಗೌಡ ಗೌಡರ ಕೊಲೆ ಪ್ರಕರಣದ ವಿಚಾರಣೆಗೆ ವಿಧಿಸಿದ್ದ ಕಾಲಮಿತಿಯನ್ನು ಸುಪ್ರೀಂ ಕೋರ್ಟ್‌ ಮಂಗಳವಾರ ರದ್ದು ಮಾಡಿದೆ. 

ಕೊಲೆ ಪ್ರಕರಣದ ವಿಚಾರಣೆಯನ್ನು ನಾಲ್ಕು ವಾರಗಳಲ್ಲಿ ಪೂರ್ಣಗೊಳಿಸಬೇಕು ಎಂದು ಹೈಕೋರ್ಟ್‌ ನಿರ್ದೇಶನ ನೀಡಿತ್ತು. ಆರೋಪಿಗಳಾದ ಚಂದ್ರಶೇಖರ್ ಹಾಗೂ ದಿನೇಶ್ ಎಂಬುವರು ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ‘ಈ ಪ್ರಕರಣದಲ್ಲಿ 126 ಸಾಕ್ಷಿಗಳಿದ್ದಾರೆ. ಈವರೆಗೆ 25 ಸಾಕ್ಷಿಗಳ ವಿಚಾರಣೆ ಮುಗಿದಿದೆ. ಬಾಕಿ ಸಾಕ್ಷಿಗಳ ವಿಚಾರಣೆಯನ್ನು ನಾಲ್ಕು ವಾರಗಳಲ್ಲಿ ಪೂರ್ಣಗೊಳಿಸುವುದು ಅಸಾಧ್ಯ’ ಎಂದು ಅರ್ಜಿದಾರರ ಪರ ವಕೀಲರು ವಾದಿಸಿದರು. ಈ ವಾದವನ್ನು ನ್ಯಾಯಪೀಠ ಮಾನ್ಯ ಮಾಡಿದೆ. 

ಪ್ರಕರಣದ ಮೊದಲ ಆರೋಪಿ ಬಸವರಾಜ ಶಿವಪ್ಪ ಮುತ್ತಗಿಯನ್ನು, ಮೂರನೇ ಬಾರಿಗೆ ಮಾಫಿ ಸಾಕ್ಷಿಯಾಗಿ ಪರಿಗಣಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಮಾನಿಸಿತ್ತು. ಇದನ್ನು ಅರ್ಜಿದಾರರನ್ನು ಪ್ರಶ್ನಿಸಿದ್ದರು. ಈ ವಿಷಯದಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ ಎಂದು ನ್ಯಾಯಪೀಠ ಸ್ಪಷ್ಟಪಡಿಸಿತು. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.