ADVERTISEMENT

ಯುವತಿ ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ

​ಪ್ರಜಾವಾಣಿ ವಾರ್ತೆ
Published 19 ಜುಲೈ 2020, 7:43 IST
Last Updated 19 ಜುಲೈ 2020, 7:43 IST

ಬೆಳಗಾವಿ: ಇಲ್ಲಿನ ಬಿಮ್ಸ್‌ ಕೋವಿಡ್‌ ವಾರ್ಡ್‌ನಲ್ಲಿ ಕಾಗವಾಡ ತಾಲ್ಲೂಕಿನ 30 ವರ್ಷದ ಯುವತಿ ಮೃತಪಟ್ಟಿದ್ದಾರೆ. ‘ಅವರಿಗೆ ಸೂಕ್ತ ಚಿಕಿತ್ಸೆ ಸಿಗದೆ ಇರುವುದರಿಂದ ನರಳಾಡಿ ಸಾವಿಗೀಡಾಗಿದ್ದಾರೆ’ ಎಂದು ಪೋಷಕರು ಆರೋಪಿಸಿದ್ದಾರೆ.

ಯುವತಿಯು ನರಳಾಡುತ್ತಿದ್ದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಭಾನುವಾರ ವೈರಲ್ ಆಗಿದೆ. ವಾರ್ಡ್‌ನಲ್ಲಿದ್ದ ಇತರ ರೋಗಿಗಳು ವಿಡಿಯೊ ಮಾಡಿ ಹಂಚಿಕೊಂಡಿದ್ದಾರೆ.

‘ಅವರಿಗೆ ಕೋವಿಡ್‌ ಜೊತೆಗೆ ಮಧುಮೇಹ ಸಮಸ್ಯೆಯೂ ಇತ್ತು. ನಾಲ್ಕು ದಿನಗಳವರೆಗೆ ಅವರಿಗೆ ಚಿಕಿತ್ಸೆ ನೀಡಲಾಗಿದೆ. ಚಿಕಿತ್ಸೆಗೆ ಸ್ಪಂದಿಸದೆ ಅವರು ಶುಕ್ರವಾರ ನಿಧನರಾಗಿದ್ದಾರೆ’ ಎಂದು ಬಿಮ್ಸ್‌ ವೈದ್ಯಕೀಯ ನಿರ್ದೇಶಕ ಡಾ.ವಿನಯ್ ದಾಸ್ತಿಕೊಪ್ಪ ‘ಪ್ರಜಾವಾಣಿ’ಗೆ ತಿಳಿಸಿದರು.

ADVERTISEMENT

ಇದೇ ಆಸ್ಪತ್ರೆಯಲ್ಲಿ, ಅಥಣಿ ತಾಲ್ಲೂಕಿನ ವೃದ್ಧರೊಬ್ಬರು ನೆಲದ ಮೇಲೆ ನರಳಾಡಿ ಶುಕ್ರವಾರ ಸಾವಿಗೀಡಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.