ಬೆಂಗಳೂರು: ರಾಜ್ಯ ಯುವ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಎಚ್.ಎಸ್. ಮಂಜುನಾಥ್ ಗೌಡ ಅವರು ಸೋಮವಾರ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ‘ಯುವ ಸಂಕಲ್ಪ’ ಪರಿಕಲ್ಪನೆಯಡಿ ಬೆಳಿಗ್ಗೆ 11.30ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಹಾಲಿ ಅಧ್ಯಕ್ಷ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಅವರು ಮಂಜುನಾಥ್ ಅವರಿಗೆ ಅಧಿಕಾರ ಹಸ್ತಾಂತರ ಮಾಡಲಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಅಖಿಲ ಭಾರತ ಯುವ ಕಾಂಗ್ರೆಸ್ ಅಧ್ಯಕ್ಷ ಉದಯ ಬಾನು ಚಿಬ್, ಕೆಪಿಸಿಸಿ ಕಾರ್ಯಾಧ್ಯಕ್ಷರು, ಸಚಿವರು, ಶಾಸಕರು ಮತ್ತು ಕೆಪಿಸಿಸಿ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.