ADVERTISEMENT

ಶಿಕ್ಷಣ ಸಚಿವರಿಂದ ರಾಷ್ಟ್ರಧ್ವಜಕ್ಕೆ ಅಪಮಾನ: ಯುವ ಕಾಂಗ್ರೆಸ್ ಆರೋಪ

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2022, 21:26 IST
Last Updated 11 ಆಗಸ್ಟ್ 2022, 21:26 IST
ತಿಪಟೂರಿನಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ರಾಷ್ಟ್ರಧ್ವಜ ಹಿಡಿದು ಹೆಜ್ಜೆ ಹಾಕಿದರು. ರಾಷ್ಟ್ರಧ್ವಜದ ಮೇಲೆ ಎಬಿವಿಪಿ ಧ್ವಜ ಹಾರಾಡುತ್ತಿರುವುದು
ತಿಪಟೂರಿನಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ರಾಷ್ಟ್ರಧ್ವಜ ಹಿಡಿದು ಹೆಜ್ಜೆ ಹಾಕಿದರು. ರಾಷ್ಟ್ರಧ್ವಜದ ಮೇಲೆ ಎಬಿವಿಪಿ ಧ್ವಜ ಹಾರಾಡುತ್ತಿರುವುದು   

ತಿಪಟೂರು: ನಗರದಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ತಿರಂಗಾ ಯಾತ್ರೆ ನಡೆಸುವ ಸಮಯದಲ್ಲಿ ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ಎಬಿವಿಪಿ ಧ್ವಜ ಹಿಡಿದು ರಾಷ್ಟ್ರಕ್ಕೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ಯುವ ಕಾಂಗ್ರೆಸ್ ಘಟಕವು ನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದೆ.

ನಗರದಲ್ಲಿ ಬುಧವಾರ ಎಬಿವಿಪಿ ಹಮ್ಮಿಕೊಂಡಿದ್ದ ತಿರಂಗಾ ಯಾತ್ರೆಯಲ್ಲಿ ಸಚಿವರು, ಶಾಲಾ ಮಕ್ಕಳು, ಶಿಕ್ಷಕರು ಭಾಗವಹಿಸಿದ್ದರು. ಈ ಸಮಯದಲ್ಲಿರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ಎಬಿವಿಪಿ ಧ್ವಜ ಹಾರಿಸಿ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ. ಅವರ ಕ್ರಮ ಕೈಗೊಳ್ಳಬೇಕು ಎಂದು ಯುವ ಕಾಂಗ್ರೆಸ್ ಘಟಕದ ಪ್ರಧಾನ ಕಾರ್ಯದರ್ಶಿ ಬಿ.ವಿ. ಹರಿಪ್ರಸಾದ್ ನೀಡಿರುವ ದೂರಿನಲ್ಲಿ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT