ADVERTISEMENT

ಬಿಜೆಪಿ ಕಚೇರಿಗೆ ನುಗ್ಗಲು ಯುವ ಕಾಂಗ್ರೆಸ್‌ ಕಾರ್ಯಕರ್ತರ ಯತ್ನ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2024, 15:16 IST
Last Updated 7 ಫೆಬ್ರುವರಿ 2024, 15:16 IST
<div class="paragraphs"><p>ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ತಡೆದು ವಶಕ್ಕೆ ಪಡೆದರು</p></div>

ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ತಡೆದು ವಶಕ್ಕೆ ಪಡೆದರು

   

ಬೆಂಗಳೂರು: ಅನುದಾನ ತಾರತಮ್ಯ, ಬರ ಪರಿಹಾರ ಹೀಗೆ ಹಲವು ವಿಚಾರಗಳಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ ಎಂದು ಅತ್ತ ದೆಹಲಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರೆ, ಇತ್ತ ಮಲ್ಲೇಶ್ವರದಲ್ಲಿರುವ ಬಿಜೆಪಿ ರಾಜ್ಯ ಕಚೇರಿಗೆ ಯುವ ಕಾಂಗ್ರೆಸ್‌ ಕಾರ್ಯಕರ್ತರು ನುಗ್ಗಲು ಯತ್ನಿಸಿದರು.

ಕಚೇರಿಯ ಮುಂಭಾಗದಲ್ಲಿ ಅಳವಡಿಸಿದ್ದ ಬ್ಯಾರಿಕೇಡ್‌ಗಳನ್ನು ತಳ್ಳಿ ಕಚೇರಿಯ ಒಳಗೆ ಪ್ರವೇಶಿಸಲು ಯುವ ಕಾಂಗ್ರೆಸ್ ಕಾರ್ಯಕರ್ತರು ಯತ್ನಿಸಿದಾಗ ಪೊಲೀಸರು ತಡೆದರು. ಈ ವೇಳೆ ನೂಕಾಟ, ತಳ್ಳಾಟ ನಡೆಯಿತು. ಪ್ರತಿಭಟನಾನಿರತರನ್ನು ಪೊಲೀಸರು ವಶಕ್ಕೆ ಪಡೆದು ಬಳಿಕ ಬಿಡುಗಡೆ ಮಾಡಿದರು. 

ADVERTISEMENT

ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುವ ವೇಳೆ ಅಲ್ಲಿದ್ದ ಬಿಜೆಪಿ ಕಾರ್ಯಕರ್ತರು ತೀವ್ರ ಪ್ರತಿರೋಧ ವ್ಯಕ್ತಪಡಿಸಿದರು. ಅಲ್ಲದೆ, ಕಾಂಗ್ರೆಸ್ ಕಾರ್ಯಕರ್ತರತ್ತ ನುಗ್ಗಲು ಯತ್ನಿಸಿದರು. ಆಗ ಪೊಲೀಸರು ಮಧ್ಯಪ್ರವೇಶಿಸಿ ತಡೆದರು. ಹನುಮಧ್ವಜ ಹಿಡಿದು ಕಾಂಗ್ರೆಸ್​ಗೆ ಧಿಕ್ಕಾರ ಕೂಗಿದ ಬಿಜೆಪಿ ಕಾರ್ಯಕರ್ತರು, ಮೋದಿ ಪರ ಘೋಷಣೆ ಮೊಳಗಿಸಿದರು. ಈ ವೇಳೆ ಎರಡೂ ಕಡೆಯ ಕಾರ್ಯಕರ್ತರನ್ನು ತಡೆಯಲು ಪೊಲೀಸರು ಹರಸಾಹಸಪಟ್ಟರು.

ರೇಸ್ ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಕೆಪಿಸಿಸಿ ಎಸ್‌ಸಿ ಘಟಕದ ಅಧ್ಯಕ್ಷ ಆರ್. ಧರ್ಮಸೇನ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.