ADVERTISEMENT

ಯುವಜನ ಸಂಪನ್ಮೂಲ ಬಳಕೆಯಿಂದ ಅಭಿವೃದ್ಧಿ: ಖಾದ್ರಿ ನರಸಿಂಹಯ್ಯ

ಎನ್‌ಎಸ್‌ಎಸ್‌ ಪ್ರಾಂತೀಯ ಕೇಂದ್ರ ನಿರ್ದೇಶಕ ಅಭಿಮತ

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2021, 21:23 IST
Last Updated 5 ಮಾರ್ಚ್ 2021, 21:23 IST
ಹೊಸದಾಗಿ ನೇಮಕಗೊಂಡ ರಾಜ್ಯ ಎನ್‌ಎಸ್‌ಎಸ್‌ ಅಧಿಕಾರಿ ಪ್ರತಾಪ್ ಲಿಂಗಯ್ಯ ಅವರನ್ನು ಸನ್ಮಾನಿಸಲಾಯಿತು. ಪ್ರೇಮ್ ಹಾಗೂ ವಿಶ್ವವಿದ್ಯಾಲಯದ ಸಂಯೋಜನಾಧಿಕಾರಿ ಡಾ. ಎನ್ ‌ಸತೀಶ್ ಗೌಡ ಉಪಸ್ಥಿತರಿದ್ದರು.
ಹೊಸದಾಗಿ ನೇಮಕಗೊಂಡ ರಾಜ್ಯ ಎನ್‌ಎಸ್‌ಎಸ್‌ ಅಧಿಕಾರಿ ಪ್ರತಾಪ್ ಲಿಂಗಯ್ಯ ಅವರನ್ನು ಸನ್ಮಾನಿಸಲಾಯಿತು. ಪ್ರೇಮ್ ಹಾಗೂ ವಿಶ್ವವಿದ್ಯಾಲಯದ ಸಂಯೋಜನಾಧಿಕಾರಿ ಡಾ. ಎನ್ ‌ಸತೀಶ್ ಗೌಡ ಉಪಸ್ಥಿತರಿದ್ದರು.   

ಬೆಂಗಳೂರು: ‘ದೇಶದ ಒಟ್ಟು ಜನಸಂಖ್ಯೆಯಲ್ಲಿ ಶೇ 55ರಷ್ಟು ಯುವಜನರಿದ್ದಾರೆ. ಈ ಯುವಸಂಪನ್ಮೂಲವನ್ನು ಸಮರ್ಥವಾಗಿ ಬಳಸಿಕೊಂಡರೆ ದೇಶ ಇನ್ನೂ ಹೆಚ್ಚು ಅಭಿವೃದ್ಧಿ ಸಾಧಿಸುವುದರಲ್ಲಿ ಅನುಮಾನವಿಲ್ಲ’ ಎಂದು ಎನ್‌ಎಸ್‌ಎಸ್‌ ಪ್ರಾಂತೀಯ ಕೇಂದ್ರ ನಿರ್ದೇಶಕ ಖಾದ್ರಿ ನರಸಿಂಹಯ್ಯ ಹೇಳಿದರು.

ಬೆಂಗಳೂರು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಶುಕ್ರವಾರ ನಡೆದ ಸ್ಕೂಲ್ ಬೆಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಎನ್‌ಎಸ್‌ಎಸ್‌ ವಿದ್ಯಾರ್ಥಿಗಳನ್ನು ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳ ಏಳಿಗೆ ಮತ್ತು ಶ್ರೇಯೋಭಿವೃದ್ಧಿಗೆ ಬಳಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಎನ್ಎಸ್ಎಸ್ ಕಾರ್ಯಕ್ರಮ ಸಂಯೋಜನಾಧಿಕಾರಿ ಎನ್. ಸತೀಶ್ ಗೌಡ, ‘ಕೋವಿಡ್‌ ಸಂದರ್ಭದಲ್ಲಿ ಎನ್‌ಎಸ್‌ಎಸ್‌ ವಿದ್ಯಾರ್ಥಿಗಳು ಅದ್ವಿತೀಯ ಕೆಲಸ ಮಾಡಿದ್ದಾರೆ. ಸ್ಕೂಲ್ ಬೆಲ್ ಕಾರ್ಯಕ್ರಮದ ಮೂಲಕ ಎಷ್ಟೊ ಬಡ ವಿದ್ಯಾರ್ಥಿಗಳಿಗೆ ಹಾಗೂ ಗ್ರಾಮೀಣ ಪ್ರದೇಶ ವಿದ್ಯಾರ್ಥಿಗಳಿಗೆ ನೆರವಾಗಲಿದ್ದಾರೆ’ ಎಂದರು.

ADVERTISEMENT

ಬೆಂಗಳೂರು ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯ ಪ್ರೇಮ್‌,‘ಶಾಲೆ ಬಿಟ್ಟಿರುವ ವಿದ್ಯಾರ್ಥಿಗಳು ಪುನಃ ಶಾಲೆಗೆ ಹಾಜರಾಗುವಂತೆ ಮಾಡಲಾಗುವುದಲ್ಲದೆ, ಬಾಲ್ಯವಿವಾಹ ತಡೆಗಟ್ಟುವ ಕೆಲಸವನ್ನು ಸ್ಕೂಲ್ ಬೆಲ್ ಕಾರ್ಯಕ್ರಮದ ಮೂಲಕ ಮಾಡಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.