ADVERTISEMENT

ಸುರತ್ಕಲ್: ಕೋವಿಡ್‌ ವರದಿ ನೆಗೆಟಿವ್, ಯುವಕನ ಶವ ಕುಟುಂಬಕ್ಕೆ ಹಸ್ತಾಂತರ

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2020, 4:14 IST
Last Updated 15 ಏಪ್ರಿಲ್ 2020, 4:14 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮಂಗಳೂರು: ಮಂಗಳವಾರ ಸಂಜೆ ಮೃತಪಟ್ಟಿದ್ದ ಇಲ್ಲಿನ ಸುರತ್ಕಲ್ ಸಮೀಪದ‌ ಇಡ್ಯಾ ನಿವಾಸಿ 27 ವರ್ಷ ವಯಸ್ಸಿನ ಯುವಕನ ಗಂಟಲಿನ ದ್ರವದ ಮಾದರಿ ಪರೀಕ್ಷೆಯ ವರದಿ ಬಂದಿದ್ದು, ಕೋವಿಡ್- 19 ಸೋಂಕು ಇಲ್ಲ ಎಂಬುದು ದೃಢಪಟ್ಟಿದೆ. ಯುವಕನ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರ ಮಾಡಲಾಗಿದೆ.

ಅಪೆಂಡಿಸೈಟಿಸ್ ಸಮಸ್ಯೆಯಿಂದ ಬಳಲುತ್ತಿದ್ದ ಯುವಕ ಆಸ್ಪತ್ರೆಗೆ ಕರೆತರುವಾಗ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದ. ಅಂತಿಮ ಕ್ಷಣಗಳಲ್ಲಿ‌ ಉಸಿರಾಡಲು ಕಷ್ಟಪಡುತ್ತಿದ್ದ ಎಂಬ ಕಾರಣಕ್ಕೆ ಮೃತದೇಹದಿಂದಲೇ ಗಂಟಲಿನ ದ್ರವದ ಮಾದರಿಯನ್ನು ಸಂಗ್ರಹಿಸಲಾಗಿತ್ತು.

ತದೇಹವನ್ನು ವೆನ್ಲಾಕ್ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿತ್ತು.

ADVERTISEMENT

ಯುವಕನಿಗೆ ಕೋವಿಡ್-19 ಸೋಂಕು ಇರಲಿಲ್ಲ ಎಂಬುದು ತಡರಾತ್ರಿ ಲಭಿಸಿದ ಪ್ರಯೋಗಾಲಯ ವರದಿಯಲ್ಲಿ ಖಚಿತವಾಗಿದೆ. ಅಪೆಂಡಿಸೈಟಿಸ್ ಉಲ್ಬಣಿಸಿ ಆತ ಮೃತಪಟ್ಟಿರುವುದು ಖಾತರಿಯಾಗಿದೆ. ಆ ಬಳಿಕ ಮೃತದೇಹವನ್ನು ಅಂತಿಮ ಸಂಸ್ಕಾರಕ್ಕಾಗಿ ಕುಟುಂಬಕ್ಕೆ ಹಸ್ತಾಂತರ ಮಾಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಡಳಿತದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.