ADVERTISEMENT

ಕರ್ನಾಟಕ ಯುವನೀತಿ–22 ಕ್ಕೆ ಸಚಿವ ಸಂಪುಟ ಸಭೆ ಒಪ್ಪಿಗೆ

​ಪ್ರಜಾವಾಣಿ ವಾರ್ತೆ
Published 8 ಡಿಸೆಂಬರ್ 2022, 16:40 IST
Last Updated 8 ಡಿಸೆಂಬರ್ 2022, 16:40 IST
   

ಬೆಂಗಳೂರು: ರಾಜ್ಯದಲ್ಲಿ ಯುವ ಜನರ ಸಮಗ್ರ ಅಭಿವೃದ್ಧಿಯನ್ನು ಸಕ್ರಿಯಗೊಳಿಸುವುದು ಮತ್ತು ರಚನಾತ್ಮಕ ಸಾಮಾಜಿಕ ಬದಲಾವಣೆ ತಂದು ಯುವ ಜನರನ್ನು ಸಶಕ್ತರನ್ನಾಗಿಸುವ ಉದ್ದೇಶ ಹೊಂದಿರುವ ಕರ್ನಾಟಕ ಯುವ ನೀತಿ–22ಕ್ಕೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಯುವ ನೀತಿ ರೂಪಿಸಲು ರಾಜ್ಯ ಸರ್ಕಾರ ರಚಿಸಿದ್ದ ಡಾ.ಆರ್‌.ಬಾಲಸುಬ್ರಹ್ಮಣ್ಯಂ ಅಧ್ಯಕ್ಷತೆಯ ಸಮಿತಿಯು ಈ ಕುರಿತು ಶಿಫಾರಸು ಮಾಡಿತ್ತು.

ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ಈ ವಿಷಯ ತಿಳಿಸಿದರು.

ADVERTISEMENT

ಯುವ ಜನರ ಸುಸ್ಥಿರ ಅಭಿವೃದ್ಧಿಗಾಗಿ 2030 ರ ಕಾರ್ಯಸೂಚಿಯೊಂದಿಗೆ ಯುವ ನೀತಿಯು ಎಂಟು ವರ್ಷಗಳ ಅವಧಿಗೆ ಅಂದರೆ, 2030 ರವರೆಗೆ ಕಾರ್ಯ ನಿರ್ವಹಿಸಲಿದೆ ಎಂದರು.

ಉದ್ದೇಶಗಳು:

* ಹೆಚ್ಚು ಹೆಚ್ಚು ವಿದ್ಯಾವಂತರೂ ಮತ್ತು ಪರಿಣಿತ ಯುವ ಜನರನ್ನು ರೂಪಿಸಲು ಶಿಕ್ಷಣ ಮತ್ತು ತರಬೇತಿಯ ಪ್ರತಿ ಹಂತದಲ್ಲಿ ದಾಖಲಾತಿ ಮತ್ತು ಸಾಧನೆಯ ಮಟ್ಟವನ್ನು ಹೆಚ್ಚಿಸುವುದು.

* ಶಿಕ್ಷಣದ ಗುಣಮಟ್ಟವನ್ನು ಸುಧಾರಿಸುವುದು ಮತ್ತು ಯುವ ಜನರು ಭವಿಷ್ಯದ ಸವಾಲುಗಳನ್ನು ಎದುರಿಸಲು ಸಿದ್ಧಗೊಳಿಸಲು ಅವರಿಗೆ ತರಬೇತಿ ನೀಡುವುದು.

*ಸ್ವಯಂ ಉದ್ಯೋಗವನ್ನು ಪ್ರೋತ್ಸಾಹಿಸಲು ಯುವ ಜನ ಉದ್ಯಮಶೀಲರಿಗೆ/ ಉದ್ಯಮಿಗಳಿಗೆ ಆರ್ಥಿಕ ಬೆಂಬಲ ಮತ್ತು ಮಾರ್ಗದರ್ಶನ ನೀಡುವುದು.

* ಯುವ ಜನರ ಆರೋಗ್ಯ ಮತ್ತು ಯೋಗಕ್ಷೇಮವನ್ನು ಸುಧಾರಿಸಲು ಯುವ ಜನರ ಪೋಷಣೆ, ಲೈಂಗಿಕ ಮತ್ತು ಸಂತಾನೋತ್ಪತ್ತಿ ಆರೋಗ್ಯ ಮತ್ತು ಮಾನಸಿಕ ಆರೋಗ್ಯದ ಮೇಲೆ ಕೇಂದ್ರೀಕರಿಸುವುದು.

* ರಾಜ್ಯದ ಶ್ರೀಮಂತ ಮತ್ತು ವೈವಿಧ್ಯಮಯ ಕಲಾತ್ಮಕ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸಲು ಯುವ ಜನರಲ್ಲಿ ಅರಿವು ಮೂಡಿಸಲು ಮತ್ತು ತೊಡಗಿಸಿಕೊಳ್ಳಲು ಮಾರ್ಗಗಳನ್ನು /ವಿಧಾನಗಳನ್ನು ಅಭಿವೃದ್ಧಿಪಡಿಸುವುದು.

* ನಾಯಕತ್ವ ಗುಣಗಳನ್ನು ಬೆಳೆಸುವ ಮೂಲಕ ಯುವಜನರು ನಾಗರಿಕ ಮತ್ತು ರಾಜಕೀಯ ಭಾಗವಹಿಸುವಿಕೆಯನ್ನು ಸಕ್ರಿಯಗೊಳಿಸುವುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.