ADVERTISEMENT

ಜೆಡಿಎಸ್ ಕಾರ್ಯಕರ್ತರಿಗೆ ಪತ್ರ ಬರೆದ ವೈಎಸ್ವಿ ದತ್ತಾ

ಎದುರಾಳಿಗಳ ತಂತ್ರಕ್ಕೆ ನಾವು ಬಲಿಯಾಗುವುದು ಬೇಡ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 10 ಜುಲೈ 2021, 9:31 IST
Last Updated 10 ಜುಲೈ 2021, 9:31 IST
ವೈಎಸ್ವಿ ದತ್ತಾ
ವೈಎಸ್ವಿ ದತ್ತಾ    

ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ ಕುಮಾರಸ್ವಾಮಿ ಅವರ ನಡುವಿನ ವಾಕ್ಸಮರ ತಾರಕಕ್ಕೇರಿರುವ ಬೆನ್ನಲ್ಲೇ, ಜೆಡಿಎಸ್ ಕಾರ್ಯಕರ್ತರು ತಾಳ್ಮೆ ಕಾಪಾಡಿಕೊಳ್ಳಬೇಕು ಎಂದು ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷ ವೈಎಸ್ವಿ ದತ್ತಾಮನವಿ ಮಾಡಿದ್ದಾರೆ.

ಕಾರ್ಯಕರ್ತರಿಗೆ ಬರೆದಿರುವ ಪತ್ರವನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿರುವ ಅವರು, ‘ಅನಗತ್ಯವಾಗಿ ನಮ್ಮನ್ನು ಪ್ರಚೋದಿಸಿ ಕೆರಳಿಸಿ, ನಮ್ಮಿಂದಲೇ ನಮ್ಮ ಪಕ್ಷದ ವರ್ಚಸ್ಸು ಕಡಿಮೆಯಾಗುವಂತಹ ನಮ್ಮ ಎದುರಾಳಿಗಳ ತಂತ್ರಕ್ಕೆ ನಾವು ಬಲಿಯಾಗದಂತೆ ಸ್ವಯಂ ಸಹನೆ ಹಾಗೂ ಸಂಯಮವನ್ನು ತೋರಿಸುವುದು ಈ ಘಳಿಗೆಯ ನಮ್ಮೆಲ್ಲರ ಕರ್ತವ್ಯವಾಗಿದೆ’ ಎಂದು ಮನವಿ ಮಾಡಿದ್ದಾರೆ.

‘ಇಂತಹ ಸಂದರ್ಭದಲ್ಲಿ ಆವೇಶಕ್ಕೆ ಒಳಗಾಗದೇ ಪಕ್ಷದ ಮುಂದಿನ ಭವಿಷ್ಯದ ಬಗ್ಗೆ ನಾವು ತಣ್ಣಗೇ ಚಂತಿಸಬೇಕಾಗುತ್ತದೆ’ ಎಂದು ಕಾರ್ಯಕರ್ತರಿಗೆ ಕಿವಿಮಾತು ಹೇಳಿದ್ದಾರೆ.

ADVERTISEMENT

‘ರಾಜ್ಯ ಮತ್ತು ಕೇಂದ್ರದಲ್ಲಿನ ಬಿಜೆಪಿ ಸರ್ಕಾರಗಳ ವೈಪಲ್ಯದಿಂದ ಜನ ತತ್ತರಿಸಿದ್ದಾರೆ. ಹೀಗಾಗಿ ನಾವು ವಿಷಯಾಂತರ ಮಾಡದೇ ಜನಪರವಾಗಿ ಹೋರಾಟದ ಕಡೆಗೆ ಚಿಂತಿಸೋಣ’ ಎಂದು ದತ್ತಾ ಕರೆ ನೀಡಿದ್ದಾರೆ.

ಎಚ್.ಡಿ.ಕೆ ವಿರುದ್ಧ ಟೀಕೆ ಮಾಡಿದ್ದಕ್ಕೆ ಸುಮಲತಾ ಹಾಗೂ ರಾಕ್ಲೈನ್ ವೆಂಕಟೇಶ್ ಅವರ ವಿರುದ್ಧ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.