ADVERTISEMENT

ಸಿದ್ದರಾಮಯ್ಯಗೆ ಝೆಡ್‌ ಶ್ರೇಣಿಯ ಭದ್ರತೆ: ಪ್ರಸ್ತಾವ

​ಪ್ರಜಾವಾಣಿ ವಾರ್ತೆ
Published 22 ಆಗಸ್ಟ್ 2022, 19:48 IST
Last Updated 22 ಆಗಸ್ಟ್ 2022, 19:48 IST
   

ಬೆಂಗಳೂರು: ವಿಧಾನಸಭೆ ವಿರೋಧದ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಝೆಡ್‌ ಶ್ರೇಣಿಯ ಭದ್ರತೆ ಕಲ್ಪಿಸುವ ಸಾಧ್ಯತೆಯಿದ್ದು, ಮಂಗಳವಾರ ಈ ಸಂಬಂಧ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆಯಿದೆ.

ರಾಜ್ಯದ ಆಂತರಿಕ ಭದ್ರತಾ ವಿಭಾಗ ಹಾಗೂ ಅತಿ ಗಣ್ಯರ ಭದ್ರತಾ ವಿಭಾಗದ ಅಧಿಕಾರಿಗಳು ಎರಡು ಬಾರಿ ಸಭೆ ನಡೆಸಿದ್ದು, ಸಿದ್ದರಾಮಯ್ಯ ಅವರಿಗೆ ಹೆಚ್ಚಿನ ಭದ್ರತೆ ನೀಡುವುದಕ್ಕೆ ಶಿಫಾರಸು ಮಾಡಿದ್ದಾರೆ. ಈ ಪ್ರಸ್ತಾವವು ಗೃಹ ಇಲಾಖೆ ಹಿರಿಯ ಅಧಿಕಾರಿಗಳ ಕೈಸೇರಿದೆ ಎಂದು ಮೂಲಗಳು ತಿಳಿಸಿವೆ.

ಕಾರಿನ ಮೇಲೆ ಮೊಟ್ಟೆ ದಾಳಿಯಾದ ಬಳಿಕ ಸಿದ್ದರಾಮಯ್ಯ ಅವರ ಪುತ್ರ, ಶಾಸಕ ಯತೀಂದ್ರ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್‌ ಮುಖಂಡರು ಆತಂಕ ವ್ಯಕ್ತಪಡಿಸಿದ್ದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೂ ವಿರೋಧ ಪಕ್ಷದ ನಾಯಕರಿಗೆ ಹೆಚ್ಚಿನ ಭದ್ರತೆ ಒದಗಿಸುವ ಭರವಸೆ ನೀಡಿದ್ದರು.

ADVERTISEMENT

ಈಗಾಗಲೇ ಹೆಚ್ಚಿನ ಪೊಲೀಸ್‌ ಸಿಬ್ಬಂದಿಯನ್ನು ಭದ್ರತೆಗೆ ನೇಮಿಸ
ಲಾಗಿದೆ. ಅವರ ಪ್ರವಾಸದ ವೇಳೆ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಯಾವ ಶ್ರೇಣಿಯ ಭದ್ರತೆ ನೀಡಬಹುದು ಎಂಬುದನ್ನು ಗೃಹ ಇಲಾಖೆ ತೀರ್ಮಾನಿ
ಸಲಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.