ADVERTISEMENT

ಝಕೀರ ನದಾಫಗೆ ನಾಟಕ ಅಕಾಡೆಮಿಯ ರಂಗ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 4 ಜನವರಿ 2020, 13:29 IST
Last Updated 4 ಜನವರಿ 2020, 13:29 IST
ಝಕೀರ ನದಾಫ
ಝಕೀರ ನದಾಫ   

ಬೆಳಗಾವಿ: ಜಿಲ್ಲೆಯ ಸವದತ್ತಿಯ ನಾಟಕಕಾರ ಝಕೀರ ನದಾಫ ಅವರಿಗೆ ನಾಟಕ ಅಕಾಡೆಮಿಯ 2019–20ನೇ ಸಾಲಿನ ರಂಗ ಪ್ರಶಸ್ತಿ ಲಭಿಸಿದೆ.

ಕಳೆದ 23 ವರ್ಷಗಳಿಂದ ಸವದತ್ತಿಯಲ್ಲಿ ಪ್ರತಿವರ್ಷ 9 ದಿನಗಳ ‘ಪರಸಗಡ ನಾಟಕೋತ್ಸವ'ವನ್ನು ಆಯೋಜಿಸಿಕೊಂಡು ಬಂದಿದ್ದಾರೆ. ಇದಲ್ಲದೇ, ಹತ್ತು ಹಲವು ನಾಟಕಗಳನ್ನು ರಚಿಸಿ, ನಿರ್ದೇಶಿಸಿದ್ದಾರೆ. ಕೆಲವು ನಾಟಕಗಳಲ್ಲದೇ, ದೂರದರ್ಶನದ ಧಾರವಾಹಿಗಳಲ್ಲಿಯೂ ನಟಿಸಿದ್ದಾರೆ. ಭಕ್ತಿ ಗೀತೆಗಳ ಧ್ವನಿ ಸುರುಳಿಗಳನ್ನು ಬಿಡುಗಡೆ ಮಾಡಿದ್ದಾರೆ.

1968ರ ಅಕ್ಟೋಬರ್‌ 1ರಂದು ಸವದತ್ತಿಯಲ್ಲಿ ಜನಿಸಿರುವ ಝಕೀರ ಅವರು ಮೆಕ್ಯಾನಿಕಲ್‌ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ಹಾಗೂ ಎನ್‌ಟಿಟಿಎಫ್‌ನಲ್ಲಿ ಶಿಕ್ಷಣ ಪಡೆದಿದ್ದರು. ಟೂಲ್‌ ಡಿಸೈನ್‌ ಎಂಜಿನಿಯರ್‌ ಆಗಿ 10 ವರ್ಷ ಕೆಲಸ ಮಾಡಿದ್ದರು. ಇದರ ಜೊತೆಗೆ ರಂಗ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು.

ADVERTISEMENT

ಅನುದಾನ ನೀಡಲಿ

‘ಪ್ರಶಸ್ತಿ ಸಿಕ್ಕಿರುವುದಕ್ಕೆ ಸಂತೋಷವಾಗಿದೆ. ಕಲಾವಿದರನ್ನು ಪ್ರೋತ್ಸಾಹಿಸಿದಂತೆ ನಾಟಕ ತಂಡಗಳನ್ನೂ ಸರ್ಕಾರ ಪ್ರೋತ್ಸಾಹಿಸಬೇಕಾಗಿದೆ. ನಾಟಕಗಳಿಗೆ ನೀಡುವ ಅನುದಾನವನ್ನು ಇನ್ನಷ್ಟು ಹೆಚ್ಚಿಸಿದರೆ ಕಲಾವಿದರಿಗೆ ಸಹಾಯವಾಗುತ್ತದೆ’ ಎಂದು ಝಕೀರ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.