ADVERTISEMENT

ಜಿ.ಪಂ., ತಾ.ಪಂ. ಕ್ಷೇತ್ರಗಳ ಸಂಖ್ಯೆ ನಿಗದಿ

​ಪ್ರಜಾವಾಣಿ ವಾರ್ತೆ
Published 24 ಮಾರ್ಚ್ 2021, 20:18 IST
Last Updated 24 ಮಾರ್ಚ್ 2021, 20:18 IST

ಬೆಂಗಳೂರು: ರಾಜ್ಯ ಚುನಾವಣಾ ಆಯೋಗವು ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವ್ಯಾಪ್ತಿಯಲ್ಲಿನ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಸದಸ್ಯರ ಸಂಖ್ಯೆ ನಿಗದಿಗೊಳಿಸಿ ಬುಧವಾರ ಅಧಿಸೂಚನೆ ಹೊರಡಿಸಿದೆ.

ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿಯ ಒಟ್ಟು ಸದಸ್ಯರ ಸಂಖ್ಯೆ 25. ಬೆಂಗಳೂರು ಉತ್ತರ ತಾಲ್ಲೂಕು ಪಂಚಾಯಿತಿಯಲ್ಲಿ 11 ಸದಸ್ಯರು ಇರಲಿದ್ದು, ಇದೇ ವ್ಯಾಪ್ತಿಯಲ್ಲಿ 3 ಜಿಲ್ಲಾ ಪಂಚಾಯಿತಿ ಸದಸ್ಯರು ಇರುತ್ತಾರೆ. ಯಲಹಂಕ ತಾಲ್ಲೂಕು ಪಂಚಾಯಿತಿಯಲ್ಲಿ 12 ಸದಸ್ಯರು ಇರಲಿದ್ದು, ಆ ವ್ಯಾಪ್ತಿಯ ಜಿಲ್ಲಾ ಪಂಚಾಯಿತಿ ಸದಸ್ಯರ ಸಂಖ್ಯೆ 5. ಬೆಂಗಳೂರು ದಕ್ಷಿಣ ತಾಲ್ಲೂಕು ಪಂಚಾಯಿತಿಯಲ್ಲಿ 13 ಸದಸ್ಯರು ಇರಲಿದ್ದು, 5 ಮಂದಿ ಜಿಲ್ಲಾ ಪಂಚಾಯಿತಿ ಸದಸ್ಯರು ಆ ವ್ಯಾಪ್ತಿಯಲ್ಲಿ ಆಯ್ಕೆಯಾಗಲಿದ್ದಾರೆ. ಆನೇಕಲ್‌ ತಾಲ್ಲೂಕು ಪಂಚಾಯಿತಿಯಲ್ಲಿ 24 ಸದಸ್ಯರಿದ್ದು, ಅಲ್ಲಿ 9 ಮಂದಿ ಜಿಲ್ಲಾ ಪಂಚಾಯಿತಿ ಸದಸ್ಯರು ಇರುತ್ತಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯ ಒಟ್ಟು ಸದಸ್ಯರ ಸಂಖ್ಯೆ 23. ದೇವನಹಳ್ಳಿ ತಾಲ್ಲೂಕು ಪಂಚಾಯಿತಿಯಲ್ಲಿ 12 ಸದಸ್ಯರು ಇರಲಿದ್ದು, ಆ ವ್ಯಾಪ್ತಿಯಲ್ಲಿ 5 ಜಿಲ್ಲಾ ಪಂಚಾಯಿತಿ ಸದಸ್ಯರು ಆಯ್ಕೆಯಾಗುತ್ತಾರೆ. ದೊಡ್ಡಬಳ್ಳಾಪುರ ತಾಲ್ಲೂಕು ಪಂಚಾಯಿತಿಯಲ್ಲಿ 16 ಸದಸ್ಯರು ಇರಲಿದ್ದು, ಅಲ್ಲಿ 6 ಜಿಲ್ಲಾ ಪಂಚಾಯಿತಿ ಸದಸ್ಯರು ಇರುತ್ತಾರೆ. ನೆಲಮಂಗಲ ತಾಲ್ಲೂಕು ಪಂಚಾಯಿತಿಯಲ್ಲಿ 12 ಸದಸ್ಯರು ಆಯ್ಕೆಯಾಗಲಿದ್ದು, ಆ ವ್ಯಾಪ್ತಿಯಲ್ಲಿ 5 ಜಿಲ್ಲಾ ಪಂಚಾಯಿತಿ ಸದಸ್ಯರು ಇರುತ್ತಾರೆ. ಹೊಸಕೋಟೆ ತಾಲ್ಲೂಕು ಪಂಚಾಯಿತಿಯಲ್ಲಿ 24 ಸದಸ್ಯರು ಇರಲಿದ್ದು, ಅಲ್ಲಿನ ವ್ಯಾಪ್ತಿಯಲ್ಲಿ 7 ಮಂದಿ ಜಿಲ್ಲಾ ಪಂಚಾಯಿತಿ ಸದಸ್ಯರು ಆಯ್ಕೆಯಾಗುತ್ತಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.