ADVERTISEMENT

ಭಾರತ– ಆಸ್ಟ್ರೇಲಿಯಾ ಹಣಾಹಣಿ: ಟಾಸ್ ಗೆದ್ದ ವಿರಾಟ್ ಬಳಗ ಬ್ಯಾಟಿಂಗ್‌

​ಪ್ರಜಾವಾಣಿ ವಾರ್ತೆ
Published 9 ಜೂನ್ 2019, 10:39 IST
Last Updated 9 ಜೂನ್ 2019, 10:39 IST

ದ ಓವಲ್ ಕ್ರೀಡಾಂಗಣದಲ್ಲಿ ಭಾನುವಾರ ನಡೆಯುತ್ತಿರುವ ವಿಶ್ವಕಪ್ ಟೂರ್ನಿಯ ಭಾರತ–ಆಸ್ಟ್ರೇಲಿಯಾ ಪಂದ್ಯದಲ್ಲಿ ಟಾಸ್‌ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿದೆ. ತನ್ನ ಎರಡನೇ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನಾಯಕತ್ವದ ಬಳಗವು ‘ಹಾಲಿ ಚಾಂಪಿಯನ್’ ಆಸ್ಟ್ರೇಲಿಯಾ ತಂಡವನ್ನು ಎದುರಿಸುತ್ತಿದೆ. ಆ್ಯರನ್ ಫಿಂಚ್ ಬಳಗವು ಆಡಿದ ಎರಡೂ ಪಂದ್ಯಗಳಲ್ಲಿ ಜಯಭೇರಿ ಬಾರಿಸಿ ಅಮೋಘ ಆತ್ಮವಿಶ್ವಾಸದಲ್ಲಿದೆ. ಕ್ಷಣಕ್ಷಣದ ಸ್ಕೋರ್‌: https://bit.ly/2QXUHkI

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.