ADVERTISEMENT

ಕತಾರ್‌ನಲ್ಲಿ ಭಾರತದ 77ನೇ ಗಣರಾಜ್ಯೋತ್ಸವ ಆಚರಣೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 31 ಜನವರಿ 2026, 10:33 IST
Last Updated 31 ಜನವರಿ 2026, 10:33 IST
   

ಕತಾರ್‌: ನಾರ್ತ್ ಸ್ಟಾರ್ ಇಂಟರ್‌ನ್ಯಾಷನಲ್ ಕಿಂಡರ್ಗಾರ್ಟನ್‌ಲ್ಲಿ ಭಾರತದ 77ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.

ಕತಾರ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಆಶ್ರಯದಲ್ಲಿರುವ ಭಾರತೀಯ ಕ್ರೀಡಾ ಕೇಂದ್ರದ ಕಾರ್ಯದರ್ಶಿ ಅಬ್ದುಲ್ ಬಶೀರ್ ತುವರಿಕ್ಕಲ್, ನಾರ್ತ್ ಸ್ಟಾರ್ ಶೈಕ್ಷಣಿಕ ಉದ್ಯಮದ ನಿರ್ದೇಶಕ ಅಕ್ಬರ್ ಮತ್ತು ನಾರ್ತ್ ಸ್ಟಾರ್ ಇಂಟರ್‌ನ್ಯಾಷನಲ್ ಕಿಂಡರ್ಗಾರ್ಟನ್‌ನ ಪ್ರಾಂಶುಪಾಲರಾದ ಜೀನಾಥುನ್ ನಿಶಾ ಸತ್ತಾರ್ ಮತ್ತು ಭಾರತೀಯ ಸಾಂಸ್ಕೃತಿಕ ಕೇಂದ್ರದ ಮಾಜಿ ಉಪಾಧ್ಯಕ್ಷ ಸುಬ್ರಹ್ಮಣ್ಯ ಹೆಬ್ಬಾಗಲು ಅವರು ಅತಿಥಿಗಳಾಗಿ ಭಾಗವಹಿಸಿದ್ದರು.

ರಾಷ್ಟ್ರಧ್ವಜಾರೋಣ ನೆರವೇರಿಸಿ, ದೇಶದ ಗೌರವ ಮತ್ತು ಸಮಗ್ರತೆಯನ್ನು ಎತ್ತಿಹಿಡಿಯುವುದಾಗಿ ಎಲ್ಲರೂ ಪ್ರತಿಜ್ಞೆ ಮಾಡಿದರು.

ADVERTISEMENT

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಮುಖ್ಯ ಅತಿಥಿಗಳು, ಗಣರಾಜ್ಯೋತ್ಸವದ ಮಹತ್ವದ ಕುರಿತು ತಮ್ಮ ಆಲೋಚನೆಗಳು ಮತ್ತು ಅನುಭವಗಳನ್ನು ಹಂಚಿಕೊಂಡರು.

ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಾಂಶುಪಾಲರು, ಯುವ ಜನತೆ ಗೆಲ್ಲುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಮತ್ತು ಉಜ್ವಲ ಭವಿಷ್ಯಕ್ಕಾಗಿ ಹೋರಾಟದ ಭಾವನೆ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಸಮಾರಂಭದಲ್ಲಿ ವಿದ್ಯಾರ್ಥಿಗಳು ಹಾಡಿದ ದೇಶಭಕ್ತಿ ಗೀತೆಗಳು ಮತ್ತು ನೃತ್ಯ ಪ್ರದರ್ಶನ ಗಮನಸೆಳೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.